ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಮೃತರನ್ನು ಪ್ರಕಾಶ್ ಎಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಮೂಗೇನಹಳ್ಳಿ ಬಳಿ ಅಪಘಾತ ಸಂಭವಿಸಿದ್ದು, ರಸ್ತೆ ಕ್ರಾಸ್ ಮಾಡುವ ವೇಳೆ ಅತಿವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪ್ರಕಾಶ್ ಮೃತಪಟ್ಟಿದ್ದಾರೆ.
ಅಪಘಾತದ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಘಟನೆ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…