
ದೊಡ್ಡಬಳ್ಳಾಪುರ ತಾಲೂಕಿನ ಕಾಡನೂರು ಕೈ ಮರ ಬಳಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಾಗಿದೆ.
ಮಾರಸಂದ್ರ ಕಡೆಯಿಂದ ಬರುತ್ತಿದ್ದ ಕಾರಿಗೆ ದೊಡ್ಡಬಳ್ಳಾಪುರ ಕಡೆಯಿಂದ ವೇಗವಾಗಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಎರಡೂ ಡೋರ್ ಗಳು ಸಂಪೂರ್ಣ ನಜ್ಜುಗುಜ್ಜಾಗಿದೆ.

ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗಿದ್ದು, ಟೋಲ್ ತಪ್ಪಿಸುವ ಸಲುವಾಗಿ ಈ ರಸ್ತೆಗಳಲ್ಲಿ ಬರುತ್ತಿರುವ ಲಾರಿಗಳೇ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಒಂದು ಕಡೆ ರಸ್ತೆಯಲ್ಲಿ ಗುಂಡಿಗಳು, ಮತ್ತೊಂದು ಕಡೆ ಭಾರೀ ವಾಹನಗಳ ಸಂಚಾರದಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಆಲಹಳ್ಳಿ, ಅರಳುಮಲ್ಲಿಗೆ, ಕಾಡನೂರು ಕೈ ಮರ, ಮಧುರೆ ವರೆಗೂ ರಸ್ತೆ ಪಕ್ಕದಲ್ಲಿ ಹೆಚ್ಚಿನ ಶಾಲೆಗಳಿದ್ದು, ಶಾಲಾಮಕ್ಕಳು ರಸ್ತೆ ದಾಟಲು ಪರದಾಡುವಂತಾಗಿದೆ.
ಈ ಬಗ್ಗೆ ಸಂಭಂದಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸುವಂತೆ. ಸ್ಥಳೀಯರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.