ಕಾಲಿವುಡ್ ಖ್ಯಾತ ನಟ ತಲಾ ಅಜಿತ್ ಅವರು ದೊಡ್ಡ ಸಾಹಸಿ. ಸಿನಿಮಾ ಕೆಲಸಗಳ ಬಿಡುವಿನ ನಂತರ ಅವರು ಕಾರು, ಬೈಕ್ ರೇಸ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.
ಅದರಲ್ಲೂ ಕಾರುಗಳ ಬಗ್ಗೆ ಅವರಿಗೆ ವಿಶೇಷವಾದ ಕ್ರೇಜ್ ಇದೆ. ಆದರೆ ಅದರಿಂದ ಈಗ ಅಪಾಯ ಕೂಡ ಎದುರಾಗಿದೆ. ದುಬೈನಲ್ಲಿ ಕಾರು ರೇಸ್ ಅಭ್ಯಾಸ ಮಾಡುವ ಸಂದರ್ಭದಲ್ಲಿ ಅಜಿತ್ ಅವರಿಗೆ ಅಪಘಾತ ಆಗಿದೆ. 180 ಕಿಮೀ ವೇಗದಲ್ಲಿ ಅಜಿತ್ ಅವರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ತಡೆಗೋಡೆಗೆ ಡಿಕ್ಕಿಯಾಗಿದೆ.
ಕಾರು ಅಪಘಾತ ಆದ ಕೂಡಲೇ ಅಜಿತ್ ಅವರನ್ನು ರಕ್ಷಿಸಲಾಗಿದೆ. ಬಳಿಕ ಆ್ಯಂಬುಲೆನ್ಸ್ನಲ್ಲಿ ಅವರನ್ನು ಆಸ್ಪತ್ರೆಗೆ ಕಳಿಸಲಾಗಿದೆ.
ಈ ಮೊದಲು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಕೂಡ ಅಜಿತ್ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಅದಕ್ಕಿಂತಲೂ ಭಯಂಕರವಾದ ರೀತಿಯಲ್ಲಿ ಅವರ ಕಾರು ಅಪಘಾತ ಸಂಭವಿಸಿದೆ.
ದುಬೈ 24 ಅವರ್ಸ್ ರೇಸ್’ (24 ಹೆಚ್ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಅವರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಪಾಲ್ಗೊಂಡಿದ್ದರು. ಈ ಪರೀಕ್ಷೆ ಪೂರ್ಣಗೊಳ್ಳಲು ಇನ್ನೇನು ಕೆಲವೇ ನಿಮಿಷಗಳು ಇರುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಆಯಿತು ಎನ್ನಲಾಗಿದೆ.
ಸಮಾಧಾನದ ಸಂಗತಿ ಏನೆಂದರೆ, ಅಜಿತ್ ಅವರಿಗೆ ಈ ಅಪಘಾತದಿಂದ ಯಾವುದೇ ತೊಂದರೆ ಆಗಿಲ್ಲ. 180 ಕಿಲೋ ಮೀಟರ್ ವೇಗದಲ್ಲಿ ಕಾರು ಡಿಕ್ಕಿ ಆಗಿದ್ದರೂ ಕೂಡ ಅವರಿಗೆ ಯಾವುದೇ ಗಾಯಗಳು ಆಗಿಲ್ಲ ಎಂದು ಅವರು ಮ್ಯಾನೇಜರ್ ತಿಳಿಸಿದ್ದಾರೆ ಎಂದು ವರದಿ ಆಗಿದೆ.
ಅಜಿತ್ ಕುಮಾರ್ ಕಾರು ಅಪಘಾತ ಆಗಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ….