Categories: Accident

ಕಾರು ರೇಸ್​ ಅಭ್ಯಾಸ ಮಾಡುವಾಗ ತಲಾ ಅಜಿತ್ ಗೆ ಅಪಘಾತ: 180 ಕಿಮೀ ವೇಗದಲ್ಲಿದ್ದ ರೇಸ್ ಕಾರು ತಡೆಗೋಡೆಗೆ ಡಿಕ್ಕಿ: ಡಿಕ್ಕಿ ರಭಸಕ್ಕೆ ಕಾರು ಪೀಸ್ ಪೀಸ್: ಸದ್ಯ ಅಜಿತ್ ಈಗ ಹೇಗಿದ್ದಾರೆ…?

ಕಾಲಿವುಡ್ ಖ್ಯಾತ ನಟ ತಲಾ ಅಜಿತ್ ಅವರು ದೊಡ್ಡ ಸಾಹಸಿ. ಸಿನಿಮಾ ಕೆಲಸಗಳ ಬಿಡುವಿನ ನಂತರ ಅವರು ಕಾರು, ಬೈಕ್ ರೇಸ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.

ಅದರಲ್ಲೂ ಕಾರುಗಳ ಬಗ್ಗೆ ಅವರಿಗೆ ವಿಶೇಷವಾದ ಕ್ರೇಜ್ ಇದೆ. ಆದರೆ ಅದರಿಂದ ಈಗ ಅಪಾಯ ಕೂಡ ಎದುರಾಗಿದೆ. ದುಬೈನಲ್ಲಿ ಕಾರು ರೇಸ್​ ಅಭ್ಯಾಸ ಮಾಡುವ ಸಂದರ್ಭದಲ್ಲಿ ಅಜಿತ್ ಅವರಿಗೆ ಅಪಘಾತ ಆಗಿದೆ. 180 ಕಿಮೀ ವೇಗದಲ್ಲಿ ಅಜಿತ್ ಅವರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ತಡೆಗೋಡೆಗೆ ಡಿಕ್ಕಿಯಾಗಿದೆ.

ಕಾರು ಅಪಘಾತ ಆದ ಕೂಡಲೇ ಅಜಿತ್ ಅವರನ್ನು ರಕ್ಷಿಸಲಾಗಿದೆ. ಬಳಿಕ ಆ್ಯಂಬುಲೆನ್ಸ್​ನಲ್ಲಿ ಅವರನ್ನು ಆಸ್ಪತ್ರೆಗೆ ಕಳಿಸಲಾಗಿದೆ.

ಈ ಮೊದಲು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಕೂಡ ಅಜಿತ್ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಅದಕ್ಕಿಂತಲೂ ಭಯಂಕರವಾದ ರೀತಿಯಲ್ಲಿ ಅವರ ಕಾರು ಅಪಘಾತ ಸಂಭವಿಸಿದೆ.

ದುಬೈ 24 ಅವರ್ಸ್ ರೇಸ್​’ (24 ಹೆಚ್​ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಅವರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಪಾಲ್ಗೊಂಡಿದ್ದರು. ಈ ಪರೀಕ್ಷೆ ಪೂರ್ಣಗೊಳ್ಳಲು ಇನ್ನೇನು ಕೆಲವೇ ನಿಮಿಷಗಳು ಇರುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಆಯಿತು ಎನ್ನಲಾಗಿದೆ.

ಸಮಾಧಾನದ ಸಂಗತಿ ಏನೆಂದರೆ, ಅಜಿತ್ ಅವರಿಗೆ ಈ ಅಪಘಾತದಿಂದ ಯಾವುದೇ ತೊಂದರೆ ಆಗಿಲ್ಲ. 180 ಕಿಲೋ ಮೀಟರ್​ ವೇಗದಲ್ಲಿ ಕಾರು ಡಿಕ್ಕಿ ಆಗಿದ್ದರೂ ಕೂಡ ಅವರಿಗೆ ಯಾವುದೇ ಗಾಯಗಳು ಆಗಿಲ್ಲ ಎಂದು ಅವರು ಮ್ಯಾನೇಜರ್​ ತಿಳಿಸಿದ್ದಾರೆ ಎಂದು ವರದಿ ಆಗಿದೆ.

ಅಜಿತ್ ಕುಮಾರ್ ಕಾರು ಅಪಘಾತ ಆಗಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ….

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

4 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

5 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

8 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

8 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

10 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

15 hours ago