ಕಾರು‌ ಹಾಗೂ ಜಮೀನು ವಿಚಾರಕ್ಕೆ ಅಣ್ಣ-ತಮ್ಮಂದಿರ ನಡುವೆ ಗಲಾಟೆ: ತಮ್ಮನ ಮೇಲೆ ಪೆಟ್ರೋಲ್ ಸುರಿದು ಬೆಂಕಿ‌ ಹಚ್ಚಿದ ಅಣ್ಣ

ಕಾರು‌ ಹಾಗೂ ಜಮೀನು ವಿಚಾರಕ್ಕೆ ಅಣ್ಣ-ತಮ್ಮಂದಿರ ನಡುವೆ ಗಲಾಟೆಯಾಗಿದ್ದು, ಗಲಾಟೆ ತಾರಕಕ್ಕೇರಿ ಅಣ್ಣನೇ  ತಮ್ಮನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ದೇವನಹಳ್ಳಿ ತಾಲೂಕಿನ ಗೋಖರೆ ಗ್ರಾಮದಲ್ಲಿ ನಡೆದಿದೆ.

ಅಣ್ಣ ವೆಂಕಟೇಶನಿಂದ‌ ಕೊಲೆಯಾಗಿರುವ ತಮ್ಮ ಜಗದೀಶ್

ಕಳೆದ ಮೂರು ದಿನಗಳ ಹಿಂದೆ ಅಣ್ಣ-ತಮ್ಮಂದಿರ ನಡುವೆ ಕಾರು ಹಾಗೂ ಜಮೀನು ವಿಚಾರಕ್ಕೆ ಜಗಳ ನಡೆದಿದೆ.

ಅವಿಭಕ್ತ ಕುಟುಂಬವಿದ್ದಾಗ ತಮ್ಮ ಜಗದೀಶ್ ಹೆಸರಲ್ಲಿ ಕಾರನ್ನ ಖರೀದಿ ಮಾಡಲಾಗಿತ್ತು. ಆದರೆ ಇಬ್ಬರೂ ಮದುವೆಯಾದ ನಂತರ ಬೇರೆ ಬೇರೆ ವಾಸವಾಗಿದ್ದರು.

ಕಾರು ತಮ್ಮನ ಹೆಸರಲ್ಲಿ ಇದಿದ್ದರಿಂದ ಕಾರು ತಮ್ಮನ ಬಳಿಯೇ ಇತ್ತು. ನನಗೂ ಕಾರು ಬೇಕು ಎಂದು‌ ಅಣ್ಣ ಪಟ್ಟುಹಿಡಿದಿದ್ದ, ಆದರೆ ತಮ್ಮ ಕಾರು ಕೊಡಲ್ಲ ಎಂದು ಅಂದಿದಕ್ಕೆ ಅಣ್ಣ-ತಮ್ಮಂದಿರ ನಡುವೆ ಕಿರಿಕ್ ಆಗಿದೆ.

ಕಾರು ಕೊಡುವವರಿಗೂ ಬಿಡುವುದಿಲ್ಲ ಎಂದು ಅಣ್ಣ ಪೆಟ್ರೋಲ್ ಹಿಡಿದು ಕಾರಿಗೆ ಅಡ್ಡನಿಂತು, ತಮ್ಮನ ಮೇಲೆ ಏಕಾಏಕಿ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ಪರಿಣಾಮ ತಮ್ಮನಿಗೆ ಗಂಭೀರ ಗಾಯಗಳಾಗಿದ್ದವು.

ಕೂಡಲೇ ಗಾಯಾಳು ತಮ್ಮನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ಆಸ್ವತ್ರೆಯಲ್ಲಿ ತಮ್ಮ ಸಾವನ್ನಪ್ಪಿದ್ದಾನೆ.

ಸದ್ಯ ಜಮೀನು ಭಾಗವಾಗುವವರೆಗೂ ಅಂತ್ಯ ಸಂಸ್ಕಾರ ಮಾಡಲ್ಲ‌ ಅಂತ ಕುಟುಂಬಸ್ಥರು ಪಟ್ಟುಹಿಡಿದ್ದಾರೆ.

ಆರೋಪಿ ವೆಂಕಟೇಶ್‌ನನ್ನ ದೇವನಹಳ್ಳಿ ಪೊಲೀಸರು ಬಂಧನ ಮಾಡಿದ್ದಾರೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

9 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

15 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

19 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

20 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago