ಟೊಯೋಟಾ ಇಟಿಯೋಸ್ ಕಾರೊಂದು ಎರಡು ಟ್ರಕ್ ಗಳ ನಡುವೆ ಸಿಲುಕಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಮೂವರು ಪುರುಷರು, ಒಂದು ಮಗು ಸೇರಿ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪ ಭಾನುವಾರ ಮುಂಜಾನೆ ನಡೆದಿದೆ.
ನಾರಾಯಣಪ್ಪ, ಸುನಂದಮ್ಮ, ರವಿಕುಮಾರ್, ನೇತ್ರಾವತಿ, ಚೇತನ್ (ಬಾಲಕ), ಗುಣಶೇಖರ್ (ಡ್ರೈವರ್) ಮೃತ ದುರ್ದೈವಿಗಳು. ದೇವನಹಳ್ಳಿ ಬಳಿಯ ಕಾರಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ.
ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಇಟಿಯೋಸ್ ಕಾರಿನಲ್ಲಿ ತೆರಳಿದ್ದ ಒಂದೇ ಕುಟುಂಬದ ಸದಸ್ಯರು ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ಲೇನ್ ಗೆ ಹಾರಿ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು ಒಳಗೆ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಟ್ಟರು.
ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…