ವೇಗವಾಗಿ ಬಂದ ಕಾರೊಂದು ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 3 ಬಾರಿ ಪಲ್ಟಿಯಾಗಿ ಬಿದ್ದಿರುವ ಘಟನೆ ಹೈದರಾಬಾದ್‌ನ ಸಿಕಂದರಬಾದ್ ಕ್ಲಬ್ ಬಳಿ ನಡೆದಿದೆ.
ಕಾರು ಪಲ್ಟಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸದ್ಯ, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ವೀಡಿಯೋದಲ್ಲಿ ಕಾಣಿಸುವಂತೆ ವೇಗವಾಗಿ ಬಂದ ಕಪ್ಪು ಬಣ್ಣದ ಕಿಯಾ ಕರೆನ್ಸ್ ಕಾರು ಸಿಗ್ನಲ್ ಜಂಪ್ ಮಾಡಲು ಮುಂದಾಗಿದೆ. ಇದೇ ವೇಳೆ ಬಿಳಿ ಬಣ್ಣದ ಟೊಯೋಟಾ ಇನ್ನೊವಾ ಹೈಕ್ರೂಸ್ ಕಾರಿಗೆ ಡಿಕ್ಕಿ ಹೊಡೆದು 3 ಬಾರಿ ಪಲ್ಟಿ ಹೊಡೆದಿದೆ.
ಕೆಲ ಮೂಲಗಳ ಪ್ರಕಾರ ಕಾರಿನಲ್ಲಿ ಸಿಲುಕಿದ್ದವರನ್ನು ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಸುರಕ್ಷಿತವಾಗಿ ಹೊರ ತೆಗೆದಿದ್ದಾರೆ. ಕಾರಿನಲ್ಲಿದ್ದ ಚಾಲಕ ಹಾಗೂ ಪ್ರಯಾಣಿಕರಿಗೆ ಕೆಲ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…