Categories: ರಾಜ್ಯ

ಕಾರ್ಖಾನೆಗಳಲ್ಲಿ ಎಲೆಕ್ಟ್ರಾನಿಕ್ ತೂಕ ಮಷಿನ್ ಅಳವಡಿಕೆ ಕಡ್ಡಾಯ

ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮ ವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ 100 ಜನ ಅಂಗಡಿಕಾರರ ಕುಂದು ಕೊರತೆ ಆಲಿಸಿದ ಸಚಿವರು ಸಾರ್ವಜನಿಕರ ದೂರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಪಡಿತರ ಅಕ್ಕಿ ಜೊತೆಗೆ, ಡಿಬಿಟಿ ಮೊತ್ತ ಫಲಾನುಭವಿಗಳಿಗೆ ನಿಯಮಾನುಸಾರ ಪ್ರತಿ ಮಾಹೆ ಜಮೆ ಮಾಡಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಚೀಟಿ ಅನುಮೋದನೆ ಮಾಡಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸಕ್ಕರೆ ಸಚಿವರಾದ ಶಿವಾನಂದ ಎಸ್ ಪಾಟೀಲ್, ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕರಾದ ಲಕ್ಷಣ ಸವದಿ ಹಾಗೂ ಬೀಳಗಿ ಕ್ಷೇತ್ರದ ಶಾಸಕರಾದ ಜೆಟಿ ಪಾಟೀಲ್, ಆಹಾರ ಇಲಾಖೆಯ ಕಾರ್ಯದರ್ಶಿ, ಆಯುಕ್ತರು, ಕರ್ನಾಟಕ ಆಹಾರ ನಿಗಮ ವ್ಯವಸ್ಥಾಪಕ ನಿರ್ದೇಶಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರು, ಆಹಾರ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷ ಅಧಿಕಾರಿಗಳು ಹಾಗೂ ಬೆಳಗಾವಿ , ಕಲಬುರ್ಗಿ ವಿಭಾಗದ ಆಹಾರ ಇಲಾಖೆಯ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ವ್ಯವಸ್ಥಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

5 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

8 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

16 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

20 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

23 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago