ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮ ವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ 100 ಜನ ಅಂಗಡಿಕಾರರ ಕುಂದು ಕೊರತೆ ಆಲಿಸಿದ ಸಚಿವರು ಸಾರ್ವಜನಿಕರ ದೂರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಪಡಿತರ ಅಕ್ಕಿ ಜೊತೆಗೆ, ಡಿಬಿಟಿ ಮೊತ್ತ ಫಲಾನುಭವಿಗಳಿಗೆ ನಿಯಮಾನುಸಾರ ಪ್ರತಿ ಮಾಹೆ ಜಮೆ ಮಾಡಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಚೀಟಿ ಅನುಮೋದನೆ ಮಾಡಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಕ್ಕರೆ ಸಚಿವರಾದ ಶಿವಾನಂದ ಎಸ್ ಪಾಟೀಲ್, ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕರಾದ ಲಕ್ಷಣ ಸವದಿ ಹಾಗೂ ಬೀಳಗಿ ಕ್ಷೇತ್ರದ ಶಾಸಕರಾದ ಜೆಟಿ ಪಾಟೀಲ್, ಆಹಾರ ಇಲಾಖೆಯ ಕಾರ್ಯದರ್ಶಿ, ಆಯುಕ್ತರು, ಕರ್ನಾಟಕ ಆಹಾರ ನಿಗಮ ವ್ಯವಸ್ಥಾಪಕ ನಿರ್ದೇಶಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರು, ಆಹಾರ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷ ಅಧಿಕಾರಿಗಳು ಹಾಗೂ ಬೆಳಗಾವಿ , ಕಲಬುರ್ಗಿ ವಿಭಾಗದ ಆಹಾರ ಇಲಾಖೆಯ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ವ್ಯವಸ್ಥಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು.
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…
ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆರ್ಥಿಕ…