ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು, ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ ಮಾಡಿಕೊಳ್ಳುವುದು ಸೂಕ್ತ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ ಎಂದರು.
ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧವಿದೆ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…