ಕಾರ್ಗಿಲ್ ಯುದ್ಧ ಭಾರತೀಯ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ- ಮೇಜರ್ ಎಸ್.ಮಹಾಬಲೇಶ್ವರ್

ಕಾರ್ಗಿಲ್ ಯುದ್ಧ ಭಾರತೀಯ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ.‌ ಭಾರತೀಯರಲ್ಲಿ ದೇಶ ಪ್ರೇಮವನ್ನು ಮತ್ತು ಭಕ್ತಿಯನ್ನು ಅರ್ಪಿಸುವ ದಿನವನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ಎನ್.ಸಿ.ಸಿ ನಿವೃತ್ತ ಅಧಿಕಾರಿ ಮೇಜರ್ ಎಸ್.ಮಹಾಬಲೇಶ್ವರ್  ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಎನ್.ಸಿ.ಸಿ ಘಟಕದಿಂದ ನಡೆದ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತೀಯರು ಆಪರೇಶನ್ ವಿಜಯ್ ಮೂಲಕ ಕಾರ್ಗಿಲ್-ದ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಸೈನಿಕರ ಗೌರವಾರ್ಥವಾಗಿ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ ದಿನವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. 1999 ಮೇ ತಿಂಗಳಿನಲ್ಲಿ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದ ತನಕ ಅಂದರೆ ಸುಮಾರು ಎರಡು ತಿಂಗಳ ಕಾಲ ನಡೆಯಿತು. ಈ ಯುದ್ಧದಲ್ಲಿ ಲೇಹ್ ಹೆದ್ದಾರಿಯವರೆಗೆ ನುಗ್ಗಿ ಬಂದಿದ್ದ ಪಾಕ್‌ ಸೇನೆಯನ್ನು ಭಾರತೀಯ ಸೇನೆ ಕೆಚ್ಚೆದೆಯಿಂದ ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು. ಈ ಯುದ್ಧದಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಸೇರಿದಂತೆ ಸುಮಾರು 527 ಭಾರತೀಯ ಯೋಧರು ಹುತಾತ್ಮರಾದರು ಎಂದರು.

ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯ ಅಂಗವಾಗಿ ಎನ್.ಸಿ.ಸಿ ವಿದ್ಯಾರ್ಥಿಗಳು ಕಾರ್ಗಿಲ್ ಸೈನಿಕರನ್ನು ಸ್ಮರಿಸಿ ಭಾರತದ ಭೂಪಟ ರಚನೆ ಮಾಡಿ ದೀಪ ಬೆಳಗಿಸಿ ಗೌರವ ನಮನವನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಆನಂದಮೂರ್ತಿ, ಉಪಪ್ರಾಂಶುಪಾಲ ಎಸ್.ಎಸ್.ಶಿವಶಂಕರ್, ಎನ್.ಸಿ.ಸಿ ಅಧಿಕಾರಿಗಳಾದ ಎನ್.ಶ್ರೀನಿವಾಸ, ಪ್ರವೀಣ್, ಶ್ರೀಕಾಂತ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

View Comments

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

3 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

6 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

8 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

9 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

10 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

14 hours ago