ಕಳೆದ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಮತದಾನ ಕಡಿಮೆ ಪ್ರಮಾಣದಲ್ಲಿ ದಾಖಲಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನವಾಗುವಂತೆ ಜಾಗೃತಿ ಕಾರ್ಯಕ್ರಮವನ್ನು ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು ಹೇಳಿದರು.
ತಾಲೂಕಿನ ಮಜರಾಹೋಸಹಳ್ಳಿ ಗ್ರಾ. ಪಂಚಾಯಿತಿ ವ್ಯಾಪ್ತಿಗೆ ಬರುವ ಐಟಿಸಿ ಪೆಟ್ರೋ ಕಾರ್ಖಾನೆಯಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ರ ಸಂಬಂಧ ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ರವರ ನೇತೃತ್ವದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಮಿಕರಿಗೆ ಮತದಾನದ ಜಾಗೃತಿ ಮತ್ತು ಅರಿವು ಮೂಡಿಸುವ ಸಂಬಂಧ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿ ಅವರು ಮಾತನಾಡಿದರು.
ಮತದಾನದ ದಿನ ಸಾರ್ವತ್ರಿಕ ರಜೆ ಇರುತ್ತದೆ, ಆ ದಿನದಂದು ಪ್ರತಿಯೊಬ್ಬ ಕಾರ್ಮಿಕರು ತಪ್ಪದೇ ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಸದೃಢಗೊಳಿಸಬೇಕು.
ನಂತರ ಮಜರಾಹೋಸಹಳ್ಳಿ ಗ್ರಾ.ಪಂ ಪಿಡಿಓ ರವೀಂದ್ರ ಮಾತನಾಡಿ, ಸಾರ್ವಜನಿಕರು ಸೇರುವ ಸ್ಥಳದಲ್ಲಿ ಮತದಾನ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕರ ಪತ್ರ ಹಂಚಲಾಗುತ್ತಿದೆ. ಪಂಚಾಯಿತಿ ವ್ಯಾಪ್ತಿಗೆ ಬರುವ ಪ್ರತಿಯೊಂದು ಕಾರ್ಖಾನೆಗೂ ಭೇಟಿ ನೀಡಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಜತೆಗೆ ಸ್ವಚ್ಛವಾಹಿನಿಯಲ್ಲಿ ಪ್ರತಿದಿನ ಮತದಾನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಈ ವೇಳೆ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಕುಮಾರ್, ಪಿಡಿಓ ಕುಮಾರ್, ಕಾರ್ಖಾನೆ ಸಿಬ್ಬಂದಿ ಕಾರ್ಮಿಕರು ಸೇದಂತೆ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…