ಕೋಲಾರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕರ ವಿರೋಧಿ ನೀತಿಗಳ ವಿರುದ್ದ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಗುರುವಾರ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ನಗರದ ಗಾಂಧಿವನದಿಂದ ಮೆರವಣಿಗೆ ನಡೆಸಿ ತಹಶಿಲ್ದಾರ್ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ದೇಶದಲ್ಲಿ ಕಾರ್ಮಿಕರ ಹಕ್ಕುಗಳಿಗಾಗಿ ಇದ್ದ 29 ಕಾರ್ಮಿಕ ಕಾಯ್ದೆಗಳನ್ನು 4 ಕಾರ್ಮಿಕ ಕೋಡ್‌ಗಳಾಗಿ ಜಾರಿಗೊಳಿಸಿದ್ದಾರೆ ಕಾರ್ಮಿಕರು ಮುಷ್ಕರ ನಡೆಸಿದರೆ ದಂಡ, ಜೈಲು ಶಿಕ್ಷೆ, ವೇತನ ಕಡಿತಗೊಳಿಸಲಾಗುವ ನೀತಿಗಳು ಜಾರಿ ಮಾಡಿದ್ದಾರೆ. ನರೇಗಾದಡಿ ಕೆಲಸದ ಹಕ್ಕನ್ನು ಕಸೆದುಕೊಂಡು ಗ್ರಾಮೀಣ ಜನರ ದುಡಿಯುವ ಹಕ್ಕನ್ನು ನಿಯಂತ್ರಣ ಮಾಡುವ ಮೂಲಕ ಗ್ರಾಮೀಣ ಜನರ ಜೀವನ ಕಸೆದುಕೊಂಡು ಬೀದಿ ಪಾಲಾಗುವಂತೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ದೇಶದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿದ್ಯುಚ್ಛಕ್ತಿ ಖಾಸಗೀಕರಣ, ಪ್ರಸರಣ ಮತ್ತು ಅನುಷ್ಠಾನ ನಿರ್ವಹಣೆ ಖಾಸಗಿ ಬಂಡವಾಳಗಾರರಿಗೆ ನೀಡುವ ಮೂಲಕ ರೈತರು, ಜನ ಸಾಮಾನ್ಯರ ಸಬ್ಸಿಡಿಗೆ ಮೋಸ ಮಾಡಿದ್ದಾರೆ ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡದೇ ಕೃಷಿಯನ್ನು ಉತ್ತೇಜಿಸದೇ ಭೂ ಸ್ವಾದೀನ ಕಾಯ್ದೆ ಮೂಲಕ ರೈತ ಜಮೀನು ಕಸಿದುಕೊಳ್ಳುವ ಹುನ್ನಾರ ಮಾಡಿದ್ದಾರೆ ಇದನ್ನು ವಿರೋಧವನ್ನು ವ್ಯಕ್ತಪಡಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ, ವಿ.ಜಿ ಗ್ರಾಮ್ ಜಿ ಕಾಯ್ದೆ ರದ್ದುಗೊಳಿಸಬೇಕು, ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ, ಎಪಿಎಂಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳು ಸೇರಿದಂತೆ ವಿದ್ಯುಚ್ಛಕ್ತಿ ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಬೀಜ ಮಸೂದೆ ಕಾಯ್ದೆಯನ್ನು ವಾಪಸು ಮಾಡುವ ಜೊತೆಗೆ ಕಾರ್ಮಿಕರ ನಾಲ್ಕು ಕೋಡ್ ಗಳನ್ನು ಜಾರಿ ಮಾಡಲು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಕೆ.ಪಿ.ಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಕರ್ನಾಟಕ ಸರ್ಕಾರ ಕಾರ್ಮಿಕ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟಿಫಿಕೇಷನ್‌ನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ವಿರೋಧಿಸಬೇಕು. 2025 ಆಗಸ್ಟ್ ತಿಂಗಳಲ್ಲಿ ಕನಿಷ್ಠ ವೇತನ ಹೆಚ್ಚಳದ ಕುರಿತು ಕನಿಷ್ಠ ವೇತನ ಸಲಹಾ ಮಂಡಳಿ ನೀಡಿರುವ ಶಿಫಾರಸ್ಸುನ್ನು ಅಂತಿಮ ಅಧಿಸೂಚನೆಯಾಗಿ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಹೆಚ್.ಬಿ ಕೃಷ್ಣಪ್ಪ, ಎಂ. ಭೀಮರಾಜ್, ಎನ್.ಕಲ್ಪನಾ, ಆಶಾ, ವಿ.ಮಂಜುಳ, ಲಕ್ಷ್ಮಿದೇವಿ, ರಾಜಮ್ಮ, ರಾಮಚಂದ್ರಪ್ಪ, ವಿಜಯಕುಮಾರ್, ಅಂಜನಪ್ಪ, ನಿಕಿಲ್, ಶಿವಕುಮಾರ್, ಪೃಥ್ವಿ, ಮೂರ್ತಿ, ರಮೇಶ್, ನಾರಾಯಣರೆಡ್ಡಿ, ಶಾಂತಮ್ಮ, ಬುಟ್ಟಾಲ ಗಣೇಶ್, ಎಂ.ಶ್ರೀನಿವಾಸ್, ನವೀನ್ ಕುಮಾರ್, ಮುಂತಾದವರು ಇದ್ದರು,
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…