Categories: ಕೋಲಾರ

ಕಾರ್ಮಿಕರ ಹಕ್ಕುಗಳಿಗಾಗಿ ಸಿಐಟಿಯು ನೇತೃತ್ವದಲ್ಲಿ ಸಂಸದ ಮುನಿಸ್ವಾಮಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ

ಕೋಲಾರ: ಕಾರ್ಮಿಕರಿಗೆ ಕನಿಷ್ಠ ವೇತನ, ಬೆಲೆ ಏರಿಕೆ, ಕಾರ್ಮಿಕರ ಹಕ್ಕುಗಳು, ಸಂವಿಧಾನದ ಉಳುವಿಗಾಗಿ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳ ವಾಪಸ್ಸಾತಿಗೆ ಆಗ್ರಹಿಸಿ ನಗರದಲ್ಲಿರುವ ಸಂಸದ ಎಸ್.ಮುನಿಸ್ವಾಮಿ ಕಚೇರಿ ಮುಂದೆ ಬುಧವಾರ ಸಿಐಟಿಯು ನೇತೃತ್ವದಲ್ಲಿ ಬೃಹತ್ ಧರಣಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಕಳೆದ 10 ವರ್ಷಗಳಿಂದ ದೇಶದ ಕಾರ್ಮಿಕ ವರ್ಗ ತೀವ್ರ ಸಂಕಷ್ಟದಲ್ಲಿದ್ದು, ಬದುಕು ಸಾಗಿಸಲು ಹರಸಾಹಸಪಡುವಂತಾಗಿದೆ. ದೇಶವನ್ನಾಳುವ ನರೇಂದ್ರ ಮೋದಿ ಸರಕಾರ ನಿರಂತರವಾಗಿ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುತ್ತಿದೆ. ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು, ಜನಪರ ಪರ್ಯಾಯ ನೀತಿಗಳನ್ನು ಜಾರಿಗೊಳಿಸಬೇಕು ಹಾಗೂ ದುಡಿಯುವ ವರ್ಗದ ಹಕ್ಕನ್ನು ಸಂರಕ್ಷಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ದೇಶಾದ್ಯಂತ ವ್ಯಾಪಕ ಪ್ರಚಾರಾಂದೋಲನ ನಡೆಸಿದ್ದಾರೆ

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರಕಾರವು ಕೇವಲ ಬಂಡವಾಳಶಾಹಿಗಳ ಪರವಾದ ಯೋಜನೆಗಳನ್ನು ಜಾರಿಬಮಾಡುವ ಮೂಲಕ ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆಯಾಗಿದೆ. ಅಷ್ಟೇ ಅಲ್ಲದೇ ಅಯೋಧ್ಯೆ ರಾಮನ ಹೆಸರಿನಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ. ರಾಮಂದಿರ ಸ್ಥಾಪನೆ ಮಾಡಿದರೆ ಸಾಲದು ಬಡವರ ದಲಿತರ ಕಾರ್ಮಿಕರ ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ಜಾರಿ ಮಾಡಬೇಕು. ಕೋಲಾರದಲ್ಲಿ ಐದು ವರ್ಷಗಳ ಕಾಲ ಅಧಿಕಾರ ಅನುಭವಿಸಿರುವ ಸಂಸದ ಮುನಿಸ್ವಾಮಿ ಅವರ ಸಾಧನೆ ಶೂನ್ಯ ಎಂದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ, ಕೇಂದ್ರದ ನರೇಂದ್ರ ಮೋದಿ ಸರಕಾರವು ಕಾರ್ಪೊರೇಟ್, ಕೋಮುವಾದಿಗಳ ಅಕ್ರಮ ಕೂಟವಾಗಿದೆ. ತನ್ನ ಜನವಿರೋಧಿ ನೀತಿಗಳಿಂದ ದುಡಿಯುವ ವರ್ಗ ಹಾಗೂ ಜನಸಾಮಾನ್ಯರ ಬದುಕನ್ನು ನಾಶಗೊಳಿಸಿದೆ. ದೇಶದ ಪ್ರಮುಖ ಕಾರ್ಮಿಕ ಕಾನೂನುಗಳನ್ನು ಸಂಹಿತೆಯನ್ನಾಗಿ ರೂಪಿಸಲು ಹೊರಟಿದ್ದು, ಮತ್ತೆ ಕಾರ್ಮಿಕರನ್ನು ಗುಲಾಮರನ್ನಾಗಿ ದುಡಿಸುವ ಷಡ್ಯಂತ್ರ ಅಡಗಿದೆ. ಕನಿಷ್ಠ ಕೂಲಿ, ಸಾಮಾಜಿಕ ಭದ್ರತೆ ಇಲ್ಲದೆ ಅಸಂಘಟಿತ ಕ್ಷೇತ್ರದ ಕಾರ್ಮಿಕರು ಅತ್ಯಂತ ನಿಕೃಷ್ಟವಾಗಿ ಬದುಕುವಂತಾಗಿದೆ ಎಂದು ಆರೋಪಿಸಿದರು.

ಸಿಐಟಿಯು ಜಿಲ್ಲಾ ಖಜಾಂಚಿ ಎಚ್.ಬಿ ಕೃಷ್ಣಪ್ಪ ಮಾತನಾಡಿ, ಕೇಂದ್ರ ಸರ್ಕಾರದ ನವ ಉದಾರೀಕರಣ ನೀತಿಗಳ ಜಾರಿಯ ವೇಗದಲ್ಲಿ ದೇಶದ ಅಭಿವೃದ್ಧಿಯ ಸಂಕೇತಗಳಾದ ಮಕ್ಕಳು ಮತ್ತು ಮಹಿಳೆಯರಿಗಾಗಿ ಕೊಡುವ ಸೌಲಭ್ಯಗಳಲ್ಲಿ ಕಳೆದ ಬಜೆಟ್ ನಲ್ಲಿ 8542 ಕೋಟಿ ರೂಗಳನ್ನು ಕಡಿತ ಮಾಡುವ ಮುಖಾಂತರ ಕತ್ತರಿ ಹಾಕುತ್ತಿದೆ, ಇದರಿಂದ ದೇಶದ ವಿವಿಧ ಯೋಜನೆಯಲ್ಲಿ ಸುಮಾರು 12 ಕೋಟಿ ಫಲಾನುಭವಿಗಳು ಸರಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.

ಕಳೆದ ಬಾರಿಯು ಸಂಸತ್ತಿನಲ್ಲಿ ಸುಮಾರು146 ಸದಸ್ಯರನ್ನು ಹೊರಗೆ ಹಾಕಿ ಲೋಕಸಭಯಲ್ಲಿ 18, ರಾಜ್ಯಸಭೆಯಲ್ಲಿ 17 ಬಿಲ್ ಗಳನ್ನು ಮಂಡಿಸಿ ಅಂಗೀಕರಿಸಿದೆ. ಇದು ಪ್ರಜಾತಂತ್ರಕ್ಕೆ ಎಸಗಿದ ದ್ರೋಹ, ಬಡ ಜನತೆಯ ಯೋಜನೆಗಳಿಗೆ ಹಣ ನೀಡದ ಸರ್ಕಾರ ದೇಶದ ಬಂಡವಾಳಗಾರರು ಮತ್ತು ಕಾರ್ಪೋರೇಟ್ ಕಂಪನಿಗಳಿಗೆ 14.5 ಲಕ್ಷ ಕೋಟಿ ಸಾಲ ಮನ್ನ ಮಾಡಿದೆ. ರೈತ, ಕಾರ್ಮಿಕರ ಮತ್ತು ಜನತೆಯ ಪ್ರಶ್ನೆಗಳನ್ನು ಪರಿಹರಿಸದೆ ಜನ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಅಮರನಾರಾಯಣಪ್ಪ, ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಮುಖಂಡರಾದ ಎಂ ಭೀಮರಾಜ್, ಆಶಾ, ಕೆ.ಮಂಜುನಾಥ್, ಕೇಶವರಾವ್, ತಿರುಪತಿ, ಎಲ್ಐಸಿ ಜಯರಾಂ, ತಂಗರಾಜ್, ಲಿಯೋ, ಅಶೋಕ್, ಶಿವಾನಂದ್, ನಾಗರಾಜಪ್ಪ, ಕೆ.ವಿ ಮಂಜುನಾಥ್, ನಾರಾಯಣಪ್ಪ, ಸುಶೀಲಾ, ಯಲ್ಲಪ್ಪ, ಮುನಿಸ್ವಾಮಿ, ಪೇರುಮಲಪ್ಪ, ಸುಮತಿ, ಮಂಜುಳಮ್ಮ ಇನ್ನೂ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

5 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

6 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

8 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

16 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

18 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago