ಕಾಲು ಜಾರಿ ಹೊಂಡಕ್ಕೆ ಬಿದ್ದು ಗಂಡ ಹೆಂಡತಿ ಮತ್ತು ಮಗಳ ಸಾವು

ಕಾಲು ಜಾರಿ ಹೊಂಡಕ್ಕೆ ಬಿದ್ದು ಗಂಡ ಹೆಂಡತಿ ಮತ್ತು ಮಗಳ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೈ ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ಮೂವರ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಒಬ್ಬರನ್ಬೊಬ್ಬರು ರಕ್ಷಿಸಲು ಹೋಗಿ ಕೃಷಿಹೊಂಡದಲ್ಲಿ ಬಿದ್ದು ಮೂವರು ಸಾವನ್ನಪ್ಪಿದ್ದಾರೆ.

ಗಂಡ ಮರಿಯಪ್ಪ(65), ಹೆಂಡತಿ ಮುನಿಯಮ್ಮ(60), ಮಗಳು ಭಾರತಿ (40) ಮೃತ ದುರ್ದೈವಿಗಳು.

ಕರಿಬೀರನಹೊಸಹಳ್ಳಿ ಸಮೀಪ ದೇವರ ಉತ್ಸವ ನಡೆಯುತ್ತಿತ್ತು, ಕಾರ್ಯಕ್ರಮಕ್ಕೆ ಹೋಗಿ‌ ಬರುವಾಗ ಕೈತೊಳೆಯಲು ಹೋಗಿ ದುರಂತ ಸಂಭವಿಸಿದೆ.

ಮೃತರ ಶವಗಳನ್ನು ‌ಸ್ಥಳೀಯರು ಹೊರಕ್ಕೆ ತೆಗೆದರು. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

4 minutes ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

6 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

6 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

20 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

21 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

22 hours ago