ಬೆಂಗಳೂರಿನ ಕೆಂಪಾಪುರದಲ್ಲಿರುವ ಕಾಲೇಜಿನಲ್ಲಿ ಕಾಲೇಜು ಸೆಕ್ಯೂರಿಟಿ ಗಾರ್ಡ್ ನ ಕೊಲೆ ನಡೆದಿದೆ. ಕಾಲೇಜಿನ ವಿದ್ಯಾರ್ಥಿಯಿಂದಲೇ ಸೆಕ್ಯೂರಿಟಿ ಗಾರ್ಡ್ ಕೊಲೆ ಆಗಿದೆ. ವಿದ್ಯಾರ್ಥಿಯು ಕಾಲೇಜಿಗೆ ಮದ್ಯ ಸೇವಿಸಿ ಬಂದಿದ್ದ. ಈ ವೇಳೆ ಕಾಲೇಜಿನೊಳಗೆ ಬಿಡದಿದ್ದಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.
ಹೊಟ್ಟೆಪಾಡಿಗಾಗಿ ಕಾಲೇಜಿನಲ್ಲಿ ಸೆಕ್ಯೂರಿಟಿಯಾಗಿ ಕೆಲಸ ಮಾಡುವ ವೇಳೆ ಈ ದುರ್ಘಟನೆ ನಡೆದಿರುವುದು ಖಂಡನೀಯ. ಈ ಕುರಿತು ಸೂಕ್ತ ತನಿಖೆಯಾಗಿ ತಪ್ಪಿತಸ್ಥನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ರೈತ ಮುಖಂಡ ಅಂಬರೀಶ್ ಒತ್ತಾಯಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನೊಂದ ಕುಟುಂಬಕ್ಕೆ ಸಾಂತ್ವನ ನೀಡದೇ ಇರುವುದು ವಿಪರ್ಯಾಸವೇ ಸರಿ. ಬಡ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಅಸ್ಸಾಂ ಮೂಲದ ಭಾರ್ಗಬ್ ಪಿಜಿಯಲ್ಲಿ ವಾಸವಿದ್ದು, ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಸದ್ಯ ಕೊಲೆ ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಕಿಶೋರ್ ಉತ್ತರ ಭಾರತ ಮೂಲದವರಾಗಿದ್ದು, ಕಳೆದ ಹತ್ತು ವರ್ಷಗಳಿಂದ ಇದೇ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು. ಕಾಲೇಜಿನ ಭದ್ರತಾ ಲೋಪವೇ ಈ ಸಾವಿಗೆ ಕಾರಣ ಎಂದು ಮೃತ ಕಿಶೋರ್ ಕುಟುಂಬಸ್ಥರು ಆರೋಪಿಸಿದ್ದಾರೆ.
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…