ಕಾಲೇಜು ಸೆಕ್ಯೂರಿಟಿ ಗಾರ್ಡ್ ನ ಕೊಲೆ ಪ್ರಕರಣ: ಸೂಕ್ತ ತನಿಖೆ ಹಾಗೂ ತಪ್ಪಿತಸ್ಥನಿಗೆ ತಕ್ಕ ಶಿಕ್ಷೆಗೆ ರೈತ ಮುಖಂಡನಿಂದ ಆಗ್ರಹ

ಬೆಂಗಳೂರಿನ ಕೆಂಪಾಪುರದಲ್ಲಿರುವ ಕಾಲೇಜಿನಲ್ಲಿ ಕಾಲೇಜು ಸೆಕ್ಯೂರಿಟಿ ಗಾರ್ಡ್ ನ ಕೊಲೆ ನಡೆದಿದೆ. ಕಾಲೇಜಿನ ವಿದ್ಯಾರ್ಥಿಯಿಂದಲೇ ಸೆಕ್ಯೂರಿಟಿ ಗಾರ್ಡ್ ಕೊಲೆ ಆಗಿದೆ. ವಿದ್ಯಾರ್ಥಿಯು ಕಾಲೇಜಿಗೆ ಮದ್ಯ ಸೇವಿಸಿ ಬಂದಿದ್ದ. ಈ ವೇಳೆ ಕಾಲೇಜಿನೊಳಗೆ ಬಿಡದಿದ್ದಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.

ಹೊಟ್ಟೆಪಾಡಿಗಾಗಿ ಕಾಲೇಜಿನಲ್ಲಿ ಸೆಕ್ಯೂರಿಟಿಯಾಗಿ ಕೆಲಸ ಮಾಡುವ ವೇಳೆ ಈ ದುರ್ಘಟನೆ ನಡೆದಿರುವುದು ಖಂಡನೀಯ. ಈ ಕುರಿತು ಸೂಕ್ತ ತನಿಖೆಯಾಗಿ ತಪ್ಪಿತಸ್ಥನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ರೈತ ಮುಖಂಡ ಅಂಬರೀಶ್ ಒತ್ತಾಯಿಸಿದ್ದಾರೆ.

ಈ ಕುರಿತು ಸಂಬಂಧಪಟ್ಟವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನೊಂದ ಕುಟುಂಬಕ್ಕೆ ಸಾಂತ್ವನ ನೀಡದೇ ಇರುವುದು ವಿಪರ್ಯಾಸವೇ ಸರಿ. ಬಡ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಅಸ್ಸಾಂ ಮೂಲದ ಭಾರ್ಗಬ್ ಪಿಜಿಯಲ್ಲಿ ವಾಸವಿದ್ದು,  ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಸದ್ಯ ಕೊಲೆ ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಕಿಶೋರ್ ಉತ್ತರ ಭಾರತ ಮೂಲದವರಾಗಿದ್ದು, ಕಳೆದ ಹತ್ತು ವರ್ಷಗಳಿಂದ ಇದೇ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು. ಕಾಲೇಜಿನ ಭದ್ರತಾ ಲೋಪವೇ ಈ ಸಾವಿಗೆ ಕಾರಣ ಎಂದು ಮೃತ ಕಿಶೋರ್ ಕುಟುಂಬಸ್ಥರು ಆರೋಪಿಸಿದ್ದಾರೆ.

ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

3 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

7 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

8 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

9 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

11 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

14 hours ago