ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಚ್ಚರಿಕೆ

ಅಧಿಕೃತ ರಸಗೊಬ್ಬರ ಮಾರಾಟ ಪರವಾನಿಗೆ ಇಲ್ಲದೆ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ದಾಸ್ತಾನು ಹಾಗೂ ಮಾರಾಟ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರದ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತವರ ವಿರುದ್ಧವು ಕೂಡ ಕ್ರಮ ಕೈಗೊಳ್ಳಲಾಗುವುದು.

*ರಸಗೊಬ್ಬರ ಮಿತ ಬಳಕೆ ಇರಲಿ*

ಅತಿಯಾದ ಯೂರಿಯಾ ರಸಗೊಬ್ಬರದ ಬಳಕೆಯಿಂದ ಸಸ್ಯಗಳ ಬೆಳವಣಿಗೆ ದುರ್ಬಲವಾಗಿ, ಹೂವು ಮತ್ತು ಹಣ್ಣಿನ ಇಳುವರಿಯಲ್ಲಿ ಕುಂಠಿತವಾಗುತ್ತದೆ ಹಾಗೂ ಕೀಟ ಮತ್ತು ರೋಗಗಳ ಉಲ್ಬಣಕ್ಕೆ ಕಾರಣವಾಗುತ್ತದೆ. ಅಲ್ಲದೇ ಮಣ್ಣಿನಲ್ಲಿರುವ ಸೂಕ್ಷ್ಮ ಜೀವಿಗಳ ವೈವಿಧ್ಯತೆ ಮತ್ತು ಪರಿಸರದ ಮೇಲೆ ಗಮನಾರ್ಹವಾದ ಪರಿಣಾಮ ಬೀರುತ್ತದೆ ಹಾಗಾಗಿ ಯೂರಿಯ ರಸಗೊಬ್ಬರ ಬಳಕೆ ಮಿತಿ ಇರಲಿ.

ಯೂರಿಯಾ ಗೊಬ್ಬರವು ರೂಪಾಂತರ ಗೊಳ್ಳುವಾಗ ಬಿಡುಗಡೆಯಾಗುವ ನೈಟ್ರೇಟ್‌ಗಳು ಅಂತರ್ಜಲ ಸೇರಿ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ಯೂರಿಯಾ ಬಳಕೆಯ ಪರಿಣಾಮಕತ್ವವನ್ನು ಹೆಚ್ಚಿಸಲು ಮತ್ತು ಪರಿಸರದ ಮೇಲಿನ ದುಷ್ಪರಿಣಾಮವನ್ನು ಕಡಿಮೆ ಮಾಡಲು ಎಚ್ಚರಿಕೆಯಿಂದ ನಿರ್ವಹಿಸುವುದು ಹಾಗೂ ಇತರೆ ಪರ್ಯಾಯ ಮಾರ್ಗಗಳನ್ನು ಅನುಸರಿಸುವುದು ಸೂಕ್ತ.

*ಕೊಟ್ಟಿಗೆ, ಸಾವಯವ ಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ*

ರೈತರು 3 ವರ್ಷಗಳಿಗೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸಿ, ತಮ್ಮ ಜಮೀನಿನ ಮಣ್ಣಿನಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿ ಪಡೆಯಿರಿ, ಪ್ರತಿ ವರ್ಷ ಇಲ್ಲವಾದಲ್ಲಿ ಎರಡು ವರ್ಷಳಿಗೊಮ್ಮೆ ಕೊಟ್ಟಿಗೆ ಗೊಬ್ಬರ ಅಥವಾ ಸಾವಯವ ಗೊಬ್ಬರ ನೀಡಿ. ಮುಖ್ಯ ಬೆಳೆ ಬಿತ್ತನೆಗೆ ಒಂದೆರಡು ತಿಂಗಳ ಮೊದಲೇ ಹಸಿರು ಗೊಬ್ಬರ ಬೀಜಗಳಾದ ವೆಲೈಟ್ ಬೀನ್ಸ್, ಅಲಸಂದೆ, ಹುರುಳಿ, ಅಪ್ಪಣಬು, ಡಯಾಂಚ ಇಂತಹ ಬೆಳೆಗಳನ್ನು ಹೂವಾಡುವವರೆಗೂ ಬೆಳೆಸಿ, ಮಣ್ಣಿಗೇ ಸೇರಿಸಿ. ಶೇ 50 ರಷ್ಟು ಸಾರಜನಕವನ್ನು ಯೂರಿಯಾ ರೂಪದಲ್ಲಿ ನೀಡಿ. ನೀರಾವರಿ ಇದ್ದಲಿ ಬೆಳವಣಿಗೆ ಹಂತದಲ್ಲಿ ಅವಶ್ಯವಿದ್ದಲ್ಲಿ ಶೇಖಡ 100% ನೀರಿನಲ್ಲಿ ಕರಗುವ ಸಂಯುಕ್ತ ರಸಗೊಬ್ಬರಗಳು ಅಥವಾ ನ್ಯಾನೋ ಯೂರಿಯಾ/ನ್ಯಾನೋ ಡಿಎಪಿ ಸಿಂಪರಣೆ ಮಾಡಿಸಲು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

4 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

9 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

12 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago