
ಕಾರವಾರ-ಗೋವಾ ಸಂಪರ್ಕ ಮಾಡುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡವಾಗಿ ನಿರ್ಮಾಣ ಮಾಡಲಾಗಿದ್ದ ಸೇತುವೆ ತಡ ರಾತ್ರಿ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಲಾರಿಯೊಂದು ಚಾಲಕನ ಸಮೇತ ನದಿಗೆ ಬಿದ್ದಿದೆ ಎನ್ನಲಾಗಿದೆ.
ಕೋಡಿಭಾಗ್ ಬಳಿ ಇರುವ ಈ ಸೇತುವೆ ಫಿಲ್ಲರ್ ಕಂಬಗಳ ನಡುವೆ ಸೇತುವೆ ಮೂರ್ನಾಲ್ಕು ಕಡೆ ತುಂಡಾಗಿ ನದಿಗೆ ಬಿದ್ದಿದ್ದು, ಇದೇ ವೇಳೆ ಗೋವಾದಿಂದ ಕಾರವಾರ ಕಡೆಗೆ ಆಗಮಿಸುತ್ತಿದ್ದ ಟ್ರಕ್ ನದಿಗೆ ಬಿದ್ದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಮೀನುಗಾರರು ಹಾಗೂ ಪೋಲಿಸರು ಲಾರಿ ಚಾಲಕ ಕೇರಳ ಮೂಲದ ರಾಧಾಕೃಷ್ಣ ನಾಳಾ ಸ್ವಾಮಿ (37) ಎಂಬುವವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.