ಕಾಳಿ ನದಿ ನೀರಿನಲ್ಲಿ ಮುಳುಗಿ 6 ಮಂದಿ ಸಾವು: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಒಂದೇ ಕುಟುಂಬದ 6 ಮಂದಿ

ಹುಬ್ಬಳ್ಳಿಯಿಂದ ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಒಂದೇ ಕುಟುಂಬದ 6 ಮಂದಿ ಕಾಳಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಬಿರಿಯಂಪಾಲಿ ಗ್ರಾಮದ ಅಕೋಡಾ ಗ್ರಾಮದ ಬಳಿ ಹರಿಯುವ ಕಾಳಿ ನದಿಯಲ್ಲಿ ಘಟನೆ ನಡೆದಿದೆ.

ಹುಬ್ಬಳ್ಳಿಯ ಈಶ್ವರ ನಗರದಿಂದ ಪ್ರವಾಸಕ್ಕೆಂದು ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಒಬ್ಬರನ್ನೊಬ್ಬರು ರಕ್ಷಣೆ ಮಾಡುವುದಕ್ಕೆಂದು ತೆರಳಿ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರ ಸಹಾಯದಿಂದ ಪೊಲೀಸರು ಮೃತ ದೇಹಗಳನ್ನು ನೀರಿನಿಂದ ಹೊರಗೆ ತೆಗೆದಿದ್ದಾರೆ.

ಮೃತರನ್ನು ನಜೀರ್ ಅಹ್ಮದ್ (40), ರೇಷ್ಮಾ ಉನ್ನಿಸಾ (38), ಇಫ್ರಾ‌ ಅಹ್ಮದ್ (15), ಅಲ್ಛೀಯಾ ಅಹ್ಮದ್ (10), ಆಬೀದ್ ಅಹ್ಮದ್ (12) ಹಾಗೂ ಮೋಹಿನ್ ಅಹ್ಮದ್ (6) ಎಂದು ಗುರುತಿಸಲಾಗಿದೆ.

Ramesh Babu

Journalist

Recent Posts

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

2 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

14 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

15 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

22 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 day ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

2 days ago