ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆತುಂಬಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ವಿಶ್ವ ಆಹಾರ ದಿನ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು

ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ.
ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೇರಿಕಾದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.

ಅನ್ನ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ವರದಿ ಹೇಳುತ್ತಿದೆ. ಗೊತ್ತಿದ್ದೂ, ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದು ಹೇಳಿದರು.

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ನಮ್ಮ ಬದ್ಧತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದವರು ನಾವು. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ನಮಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ನಮ್ಮ ಬದ್ಧತೆಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು‌ ಎಂದು ತಿಳಿಸಿದರು.

ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ, ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದರು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

2 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

7 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

10 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

12 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago