ಕಾವೇರಿ ಜಲ ವಿವಾದ; ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ನಿರ್ಧಾರ ಮರುಪರಿಶೀಲಿಸುವಂತೆ ಕೇಂದ್ರ ಜಲಶಕ್ತಿಗೆ ರಾಜ್ಯ ಸರ್ಕಾರ ಮನವಿ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ರೈತರು ಮತ್ತು ಜನತೆಯ ಹಿತರಕ್ಷಣೆ ದೃಷ್ಟಿಯಿಂದ ಮರುಪರಿಶೀಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ

ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಜಾನುವಾರು ಹಾಗೂ ಜನರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ. ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆ.ಆರ್.ಎಸ್.ಹಾಗೂ ಕಬಿನಿಯಿಂದ 5,000 ಕ್ಯೂಸೆಕ್ ನೀರನ್ನು ಬಿಳಿಗುಂಡ್ಲುವಿನಿಂದ ಹರಿಸುವುದು ಸಾಧ್ಯವಿಲ್ಲ, ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸಬೇಕು, ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲ್ಲೂಕುಗಳು ಮುಂಗಾರು ವೈಫಲ್ಯದಿಂದ  ತೀವ್ರ ಬರಕ್ಕೆ ತುತ್ತಾಗಿವೆ. ಜೂನ್ ಮಾಹೆಯಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ.

ಸೆಪ್ಟೆಂಬರ್ 12 ಹಾಗೂ 24 ವರೆಗೆ ಐಎಂಡಿ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ಡಿ: 12.09.2023 ರಂದು 24.233 ಟಿಎಂಸಿ ಸಂಗ್ರಹವಿದ್ದು ( live storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆ ಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ.

ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಟಿಎಂಸಿ ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ. ಹೀಗಾಗಿ ತಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ರೈತರು ಮತ್ತು ಜನತೆಯ ಹಿತರಕ್ಷಣೆ ದೃಷ್ಟಿಯಿಂದ ಮರುಪರಿಶೀಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರುತ್ತೇನೆ ಎಂದಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

5 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

8 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

8 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

9 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

10 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

15 hours ago