ಟೀಂ ಇಂಡಿಯಾದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ 14 ವರ್ಷಗಳ ವೃತ್ತಿಜೀವನ ಅಂತ್ಯವಾಗಿದೆ. ಇಂಗ್ಲೆಂಡ್ ಸರಣಿಗೂ ಮುನ್ನ ಕೊಹ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದಾರೆ.
ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 48.7 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕ ಮತ್ತು 31 ಅರ್ಧ ಶತಕಗಳು ಸೇರಿವೆ. 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದರು. ಆ ಸರಣಿಯಲ್ಲಿ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿ ಮಿಂಚಿದ್ದರು. ನಂತರದ ಕೊನೆಯ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಕೇವಲ 85 ರನ್ ಗಳಿಸಲು ಶಕ್ತರಾದರು.
ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿರುವುದಾಗಿ ವಿರಾಟ್ ಕೊಹ್ಲಿ ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ತಿಳಿಸಿದ್ದರು. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದರು.
2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕೊಹ್ಲಿ, ನಂತರ ಒಂದು ದಶಕಗಳ ಕಾಲ ತಂಡದ ಬ್ಯಾಟಿಂಗ್ ಆಧಾರ ಸ್ತಂಭವಾಗಿದ್ದರು. ನಂತರ ತಂಡದ ನಾಯಕತ್ವ ವಹಿಸಿಕೊಂಡರು. ಕೊಹ್ಲಿ ನಾಯಕತ್ವದಲ್ಲಿ ಭಾರತ ಟೆಸ್ಟ್ ತಂಡ ಪಾರುಪತ್ಯ ಮೆರೆಯಿತು. 2018-19ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ ICC ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ 68 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 40 ಪಂದ್ಯಗಳಲ್ಲಿ ಗೆದ್ದಿದೆ.
ಟೆಸ್ಟ್‌ಗೆ ವಿದಾಯ ಘೋಷಿಸಿರುವ ಕೊಹ್ಲಿ ಏಕದಿನ ಕ್ರಿಕೆಟ್ ಮುಂದುವರಿಯಲಿದ್ದಾರೆ. ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದು, ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಬೇಸರ ತರಿಸಿರುವುದಂತೂ ಹೌದು. ಆದರೆ, ಒಂದು ದಶಕಗಳ ಕಾಲ ಕೊಹ್ಲಿ ಟೆಸ್ಟ್‌ನಲ್ಲಿ ತೋರಿದ ಪ್ರದರ್ಶನವನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಯಾಕೆಂದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು ಮೂಡಿಸಿದ ಛಾಪು ಅಂತಹದ್ದಾಗಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…