
ಸ್ಯಾಂಡಲ್ ವುಡ್ ಬಾದ್ ಷಾ ಕಿಚ್ಚ ಸುದೀಪ್ ಅವರ 52ನೇ ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ನಿನ್ನೆ ಮಧ್ಯರಾತ್ರಿ 12 ಗಂಟೆಗೆ ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ನಲ್ಲಿ ಮಿಡ್ನೈಟ್ ಬರ್ತ್ಡೇ ಸೆಲೆಬ್ರೇಷನ್ ನಡೆಯಿತು. ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕಟ್ ಮಾಡಿ ಅಭಿಮಾನಿಗಳ ಜೊತೆ ಮಾತನಾಡಿ, ಅವರಿಗೆ ಕಿವಿಮಾತು ಹೇಳಿ ಖುಷಿಪಟ್ಟಿದ್ದಾರೆ.

ಅದೇರೀತಿ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಹೆಜ್ಜಾಜಿಯಲ್ಲಿಯೂ ಸಹ ಕಿಚ್ಚ ಸುದೀಪ್ ಹುಟ್ಟುಹಬ್ಬವನ್ನು ಕೇಕ್ ಕಟ್ ಮಾಡುವ ಮೂಲಕ ಅದ್ದೂರಿಯಾಗಿ ಆಚರಣೆ ಮಾಡಲಾಯಿತು….

ಸುದೀಪ್ ಬ್ಯಾನರ್ ಗೆ ಹಾಲಿನ ಅಭಿಷೇಕ ಮಾಡಿ, ನಂತರ ಊರಿನ ಜನತೆಗೆ ಅನ್ನ ಸಂತರ್ಪಣೆ ವ್ಯವಸ್ಥೆಯನ್ನು ಸಹ ಏರ್ಪಡಿಸಲಾಗಿತ್ತು….

ಒಟ್ಟಿನಲ್ಲಿ ಕಿಚ್ಚ ಸುದೀಪ್ ಬರ್ತಡೇಯನ್ನು ಅಭಿಮಾನಿಗಳು ಹಬ್ಬದ ರೀತಿ ಆಚರಣೆ ಮಾಡಿ ಸಂಭ್ರಮಿಸಿದರು….