ಕಿಡಿಗೇಡಿಗಳಿಂದ ಗುಜರಿ ಅಂಗಡಿಗೆ ಕಿಡಿ: ತಡರಾತ್ರಿ 1ಗಂಟೆ ಸುಮಾರಿಗೆ ಕೃತ್ಯ ಎಸಗಿರೋ ದುಷ್ಕರ್ಮಿಗಳು: ಸುಟ್ಟು ಕರಕಲಾದ ಕೆಲ ಗುಜರಿ ವಸ್ತು

ಬೇಕಂತಲೇ ಯಾರೋ ಕಿಡಿಗೇಡಿಗಳು ರಾತ್ರೋರಾತ್ರಿ ಗುಜರಿ ಅಂಗಡಿಗೆ ಬೆಂಕಿ ಇಟ್ಟು ಪರಾರಿಯಾಗಿರುವ ಘಟನೆ ನಗರದ ಡಿಕ್ರಾಸ್ ರಸ್ತೆಯ ವಿ-ಕೇರ್ ಆಸ್ಪತ್ರೆ ಮುಭಾಗ ನಡೆದಿದೆ.

ನಗರದ ಚಿಕ್ಕಪೇಟೆ ನಿವಾಸಿ ಸುಬಾನ್ ಎಂಬ ವ್ಯಕ್ತಿಯ ಗುಜರಿ ಅಂಗಡಿ ಇದಾಗಿದ್ದು, ಅಂಗಡಿಗೆ ಬೆಂಕಿ ಬಿದ್ದಿರುವುದನ್ನ ಕಂಡ ವಿಕೇರ್ ಆಸ್ಪತ್ರೆ ಸಿಬ್ಬಂದಿ ಕೂಡಲೇ ಅಂಗಡಿ ಮಾಲೀಕನಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಮಾಲೀಕ ಬರುವಷ್ಟರಲ್ಲಿ ಕೆಲ ವಸ್ತುಗಳು ಬೆಂಕಿಗಾಹುತಿಯಾಗಿದ್ದವು.

ಇಂದು ಬೆಳಗ್ಗೆ ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಯವುದೇ ಪ್ರಾಣಾಪಾಯ‌ ಸಂಭವಿಸಿಲ್ಲ.ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ramesh Babu

Journalist

Recent Posts

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

2 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

2 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

11 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

12 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

23 hours ago