ಇಂದು ಮುಂಜಾನೆ ಹುಲ್ಲಿನ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲಿಗೆಗೆ ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲ್ಲೂಕಿನ ತೂಬಗೆರೆ ಹೋಬಳಿಯ ನೆಲ್ಲುಕುಂಟೆ ಗ್ರಾಮದಲ್ಲಿ ನಡೆದಿದೆ.
ರೈತ ರಾಮಾಂಜಿನಪ್ಪನವರಿಗೆ ಸೇರಿದ ರಾಗಿ ಹುಲ್ಲಿನ ಬಣವೆಗೆ ಬೇಕಂತಲೇ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಹುಲ್ಲು ಸಂಪೂರ್ಣ ಸುಟ್ಟು ಬೂದಿಯಾಗಿದೆ.
ಕುರಿತ ಮಾತನಾಡಿದ ರೈತ ರಾಮಾಂಜಿನಪ್ಪ,ತಡರಾತ್ರಿ ಸುಮಾರು ಎರಡು ಗಂಟೆಯಲ್ಲಿ ರಾಗಿ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಬಗ್ಗೆ ಮಾಹಿತಿ ಬಂತು. ಸುತ್ತಲಿನ ಜನರು ಸೇರಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದೆವು. ಆದರೆ, ಈ ವೇಳೆಗಾಗಲೇ ಸುಮಾರು 40 ಸಾವಿರ ರೂ. ಬೆಲೆ ಬಾಳುವ ಹುಲ್ಲು ಸಂಪೂರ್ಣ ಸುಟ್ಟು ಹೋಗಿತ್ತು ಎಂದು ತಮ್ಮ ಅಳಲು ತೋಡಿಕೊಂಡರು.