ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಭಸ್ಮವಾದ ರೇಷ್ಮೆ ಗೂಡು, ಜೋಳದ ಮೇವಿನ ಬಣವೆ: ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಬಿದ್ದಿದೆ: ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ: ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತಿಲ್ಲ: ಸಂತ್ರಸ್ತರ ಪರ ನಿಲ್ಲದ ಹಾಲಿ ಹಾಗೂ ಮಾಜಿ ಶಾಸಕರು- ಹರೀಶ್ ಗೌಡ ಆಕ್ರೋಶ

ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಕುಂಟೆ ಗ್ರಾಮದಲ್ಲಿ ಬಡತನದಲ್ಲೂ ಲಕ್ಷಾಂತರ ರೂ. ವ್ಯಯ ಮಾಡಿ ರೇಷ್ಮೆ ಗೂಡು ಸಾಕಿದ್ದ‌ ಬಡ ಕುಟುಂಬ. ಇನ್ನೇನು ಒಂದೆರೆಡು ದಿನದಲ್ಲಿ ರೇಷ್ಮೆ ಗೂಡನ್ನ ಮಾರುಕಟ್ಟೆಗೆ ಹಾಕುವಷ್ಟರಲ್ಲಿ, ರಾತ್ರೋರಾತ್ರಿ ರೇಷ್ಮೆ ಗೂಡು ಇದ್ದ ಮನೆ ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಸಂಪೂರ್ಣ ಭಸ್ಮವಾಗಿದೆ. ಅದೇರೀತಿ ಕಾಡುಕುಂಟೆ ಗ್ರಾಮದ ಘಟನೆ ಮಾಸುವ ಮುನ್ನವೇ ಕುಕ್ಕಲಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಸುಮಾರು 8-10 ಲೋಡ್ ಜೋಳದ‌ ಮೇವಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಸುಟ್ಟು ಕರಕಲಾಗಿದೆ. ತಾಲೂಕಿನಲ್ಲಿ ಇಂತಹ ಕುಕೃತ್ಯಗಳು ಮರುಕಳಿಸುತ್ತಿವೆ‌. ಕಿಡಿಗೇಡಿಗಳನ್ನ ಪತ್ತೆ ಹಚ್ಚಿ ಇದುವರೆಗೂ ಕಾನೂನು ಶಿಕ್ಷೆಗೆ ಒಳಪಡಿಸಿಲ್ಲ. ಇದರ ಹಿಂದೆ ರಾಜಕೀಯ ಶಡ್ಯಂತ್ರ, ಒತ್ತಡ ಇರಬಹುದೇ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಅನುಮಾನ ವ್ಯಕ್ತಪಡಿಸಿದರು.

ಶನಿವಾರ ಘಟನಾ ಸ್ಥಳಗಳಿಗೆ ಭೇಟಿ ನೀಡಿ ನಷ್ಟಕ್ಕೆ ಒಳಗಾದ ರೈತರೊಂದಿಗೆ ಮಾತುಕತೆ ನಡೆಸಿ, ಸಮಾಧಾನಪಡಿಸುವ ಮೂಲಕ‌ ಧೈರ್ಯ ತುಂಬಿದರು. ನಂತರ ಪರಿಹಾರ ಧನವನ್ನ ನೀಡುವ ಭರವಸೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಾಲೂಕಿಗೆ ರಾತ್ರಿ 7ಗಂಟೆಗೆ ಬಂದು ಟಾರ್ಚ್ ಹಾಕಿಕೊಂಡು ಕಾಟಾಚಾರಕ್ಕೆ ಬರ ಸಮೀಕ್ಷೆ ಮಾಡಿಕೊಂಡು ಹೋಗಿದ್ದಾರೆ. ಇಂತಹ ನೈಜ ಘಟನೆಗಳ‌ ಸ್ಥಳಗಳಿಗೆ ಬಂದು ಪರಿಶೀಲಿಸಿ ರೈತರಿಗೆ ಪರಿಹಾರ ಒದಹಿಸುವ ಕಾರ್ಯ ಮಾಡಬೇಕು ಎಂದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಬಿದ್ದಿದೆ. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರ ಬಗ್ಗೆ ಹಾಲಿ ಹಾಗೂ ಮಾಜಿ ಶಾಸಕರು ತಲೆಕೆಡಿಸಿಕೊಳ್ಳುತ್ತಿಲ್ಲ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಿಡಿಗೇಡಿಗಳ ಕಾಟ ಹೆಚ್ಚಾಗಿದ್ದು, ಸಾವು ನೋವಿಗೆ ಕೊನೆಯೇ ಇಲ್ಲದಂತಾಗಿದೆ. ಸಣ್ಣ ಪುಟ್ಟ ಕಾರಣಕ್ಕೆ ಕೊಲೆ, ಹಲ್ಲೆ ನಡೆಯುತ್ತಿದ್ದು, ದುಷ್ಕರ್ಮಿಗಳು ಮೂಕ ಗೋವುಗಳು ತಿನ್ನುವ ಮೇವಿಗೆ ಬೇಕಂತಲೇ ಬೆಂಕಿ ಹಚ್ಚಿರುವುದು ಶೋಚನೀಯ ಸಂಗತಿ ಎಂದು ಹೇಳಿದರು.

ಸಂದರ್ಭದಲ್ಲಿ ಮುಖಂಡರಾದ ನಾರಾಯಣಪ್ಪ, ಶಾಂತಿನಗರ ಪ್ರವೀಣ್, ಶ್ರೀನಿವಾಸ್, ಅಜ್ಜಪ್ಪ, ಗಂಗಾಧರ್, ತಿಪ್ಪರಾಜು, ಲಕ್ಷ್ಮೀಕಾಂತ್ ಸೇರಿದಂತೆ ಮತ್ತಿತರರಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿಗೆ ‘ವಾತ್ಸಲ್ಯ’ ಮನೆ ಹಸ್ತಾಂತರ

ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

11 hours ago

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

14 hours ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

16 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

17 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

17 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

21 hours ago