ಕಿಡಿಗೇಡಿಗಳ ಕೃತ್ಯಕ್ಕೆ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌, ಸೇವಂತಿ ಹಾಗೂ ಬಟನ್ಸ್ ಸಸಿ ನಾಶ: ಸಂಕಷ್ಟಕ್ಕೀಡಾದ ರೈತ

ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ ಪೈಪ್‌ ಹಾಗೂ ಸೇವಂತಿ ಹೂವಿನ ಸಸಿಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ‌ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಗ್ರಾಮದ ರೈತ ಗಂಗಪ್ಪ ಅವರು ತಮ್ಮ ಜಮೀನಿನಲ್ಲಿ ತಿಂಗಳ ಹಿಂದೆ ಸಾವಿರಾರು ರೂಪಾಯಿ‌ ಖರ್ಚು ಮಾಡಿ ಸೇವಂತಿ ಹಾಗೂ ಬಟನ್ಸ್ ಹೂ‌ವಿನ ಸಸಿಗಳನ್ನು ನಾಟಿ ಮಾಡಿದ್ದರು.

ಗ್ರಾಮದಿಂದ ಸುಮಾರು ಅರ್ಧ ಕಿ.ಮೀ‌ ದೂರದಲ್ಲಿ ಗಂಗಪ್ಪ ಅವರ ತೋಟವಿದೆ. ಈ ಭಾಗದಲ್ಲಿ ಚಿರತೆ ಕಾಟಕ್ಕೆ ಹೆದರಿ ರಾತ್ರಿ ಮನೆಯಿಂದ ತಡವಾಗಿ ತೋಟದ ಬಳಿ ಬಂದಿದ್ದಾರೆ. ಬೆಳಿಗ್ಗೆ ಎದ್ದು ನೋಡಿದಾಗ ಕಿಡಿಗೇಡಿಗಳು ಬೇಕಂತಲೇ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌ ಗಳನ್ನು‌ ಅಲ್ಲಲ್ಲಿ ಹೊಡೆದು ಹಾಕಿದ್ದು, ಸೇವಂತಿ ಮತ್ತು ಬಟನ್ಸ್ ಸಸಿಗಳನ್ನು ನಾಶಪಡಿಸಿದ್ದಾರೆ.

ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಹೂವಿನ ಬೆಳೆ ಹಾಗೂ ಡ್ರಿಪ್ ಪೈಪ್ ಗಳನ್ನು ಹೊಡೆದು ಹಾಕಿದ್ದಾರೆ. ಬೆಳಿಗ್ಗೆ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಒಂದು ಸಸಿಗೆ ಮೂರು ರೂಪಾಯಿ ಕೊಟ್ಟು ತಂದಿದ್ದೆ. ಈಗ ಕಿಡಿಗೇಡಿಗಳ ಕೃತ್ಯಕ್ಕೆ ಎಲ್ಲವೂ ನಾಶವಾಗಿದೆ. ಈಗ ಹೊಸದಾಗಿ ಡ್ರಿಪ್ ಪೈಪ್ ಅಳವಡಿಸಲು ಆಗುವುದಿಲ್ಲ, ಬೇಸಿಗೆ ಕಾಲದಲ್ಲಿ ಸಸಿಗಳಿಗೆ ನೀರು ಹಾಯಿಸದಿದ್ದರೆ ಬೆಳೆ ನಾಶ ಆಗುತ್ತದೆ. ಇದರಿಂದ ನನಗೆ ಸಾಕಷ್ಟು ನಷ್ಟವಾಗುವ ಸಂಭವವಿದೆ ಎಂದು ರೈತ ಗಂಗಪ್ಪ ಅಳಲು ತೋಡಿಕೊಂಡರು.

ಇವರ ತೋಟದಲ್ಲೇ ಇತ್ತೀಚೆಗೆ ಪಂಪ್, ಮೋಟರ್ ಹಾಗೂ ಕೇಬಲ್ ಕಳವಾಗಿತ್ತು. ಇದೀಗ ಡ್ರಿಪ್ ಪೈಪ್, ಸೇವಂತಿ ಸಸಿ ನಾಶ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ಕಿಡಿಗೇಡಿಗಳ ಈ ಕೃತ್ಯದಿಂದಾಗಿ ತೋಟದಲ್ಲಿ ಉಳಿದುಕೊಳ್ಳಲು ಭೀತಿ ಎದುರಾಗಿದೆ. ನಮಗೆ ನ್ಯಾಯ‌ ಮತ್ತು ರಕ್ಷಣೆ ಬೇಕಾಗಿದೆ ಎಂದು ಅಲವತ್ತುಕೊಂಡರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

12 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

17 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

20 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago