ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಕೆ-ಉಪನ್ಯಾಸಕಿ ಟಿ.ಎಸ್ ಸರಸ್ವತಿ

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಸಿದೆ. ಬ್ರಿಟಿಷ ವಿರುದ್ಧ ಮಹಿಳಾ ಹೋರಾಟಗಾರ್ತಿಗೆ 1824 ರಲ್ಲಿ  ದೊರೆತ ವಿಜಯವು ಆಗಿದೆ ಎಂದು‌ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಟಿ.ಎಸ್ ಸರಸ್ವತಿ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ  ಬಾಲಕಿಯರ ವಿದ್ಯಾರ್ಥಿನಿಲಯಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ವಿಜಯದಿನ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

1857 ರಲ್ಲಿ ನಡೆದ ಸಿಪಾಯಿ ದಂಗೆಗೂ ಮೊದಲೇ 1824 ರಲ್ಲಿ ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಗೆಲುವು ಸಾಧಿಸಿದ ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮ, ದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.

ಕಿತ್ತೂರು ಸಂಸ್ಥಾನದ ದೇಸಾಯಿ ಧೂಳಪ್ಪ ದೇಸಾಯಿ‌ ಮಗಳಾದ ಚೆನ್ನಮ್ಮ ಎಳೆ ವಯಸ್ಸಿನಲ್ಲಿಯೆ ಕುದುರೆ ಸವಾರಿ ಹಾಗು ಬಿಲ್ಲುವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದಳು. ಚೆನ್ನಮ್ಮ ಅನಿವಾರ್ಯವಾಗಿ ಕಿತ್ತೂರು ‌ಸಂಸ್ಥಾನದ ಮುಖ್ಯ ಸ್ಥಾನದಲ್ಲಿ ಜವಾಬ್ದಾರಿ ನಿರ್ವಹಿಸಬೇಕಾದಗುತ್ತದೆ. ಅದನ್ನು ಚೆನ್ನಮ್ಮ ಧೈರ್ಯವಾಗಿ ಎದುರಿಸಿದ ರೀತಿ ಭಾರತದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದೆ. ಕಿತ್ತೂರು ರಾಣಿ ಚೆನ್ನಮ್ಮ   ಬ್ರಿಟಿಷರಿಗೆ  ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು.

ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಹೆಣ್ಣಿನ ಧೈರ್ಯ, ಸಾಹಸ, ಮಾನಸಿಕ ಮತ್ತು ದೈಹಿಕ ಹೋರಾಟ, ಆಡಳಿತ, ಸ್ವಾಭಿಮಾನ ಮತ್ತು   ಸ್ವಾವಲಂಬನೆ‌ ಮುಂತಾದ ವಿಚಾರಗಳು ಬಂದಾಗ ಕಿತ್ತೂರು ರಾಣಿ ಚೆನ್ನಮ್ಮ ಅವರ ನೆನಪು ಬರುತ್ತದೆ. ‌ ಬ್ರಿಟಿಷರ ಬಲಿಷ್ಠವಾದ ಸೈನ್ಯದ ವಿರುದ್ದ ರಾಣಿ ಚೆನ್ನಮ್ಮ ತನ್ನ ಸಣ್ಣ ಸೈನ್ಯದೊಂದಿಗೆ ಕೆಚ್ಚೆದೆಯ ಧೈರ್ಯ ಮತ್ತು ಸಾಹಸದಿಂದ ಹೋರಾಡಿದರು. ಆಗ ಆಕೆಗೆ ಅಷ್ಟೇ ಸಮರ್ಥವಾಗಿ, ಅತ್ಯಂತ ನಿಷ್ಠೆಯಿಂದ, ಪ್ರಾಮಾಣಿಕತೆಯಿಂದ, ಕೆಚ್ಚೆದೆಯ ಧೈರ್ಯದಿಂದ ಬೆನ್ನೆಲುಬಾಗಿ ನಿಂತು ಹೋರಾಡಿದ್ದು ಸಂಗೊಳ್ಳಿ ರಾಯಣ್ಣ‌ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಭಾರತೀಯ ಮಹಿಳೆಯರು ಹಿಂದಿನಿಂದಲೂ ಸಾಧಕರ ಸಾಲಿನಲ್ಲಿ ತಮ್ಮದೇ ಹೆಜ್ಜೆ ಗುರುತು ಉಳಿಸಿದ್ದಾರೆ. ಇಂದಿಗೂ ಸಹ ಬಾಹ್ಯಾಕಾಶಯಾನದಲ್ಲಿ ಸಾಧನೆ ಮಾಡಿರುವ ಕಲ್ಪನಾ ಚಾವ್ಲಾ, ಸುನೀತಾ ವಿಲಿಯಂ ಇಬ್ಬರೂ ಭಾರತೀಯ ಮಹಿಳೆಯರೇ ಆಗಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಹ  ಮಹಿಳೆಯರ ಕೊಡುಗೆ ಅಪಾರವಾಗಿದೆ. ಬದುಕಿನಲ್ಲಿ ಎದುರಾಗುವ ಎಂತಹ ಪರಿಸ್ಥಿತಿಯಲ್ಲೂ  ಅಸಹಾಯಕರಾಗದೆ, ಧೈರ್ಯವಾಗಿ ಹೋರಾಡಬೇಕು ಎಂಬುದಕ್ಕೆ ಕಿತ್ತೂರು ರಾಣಿ ಚೆನ್ನಮ್ಮ  ಒಂದು ಮಾದರಿಯಾಗಿದ್ದಾರೆ. ಸಾಹಸಭರಿತ, ಧೈರ್ಯವಂತ, ಸಾವಿಗೆ ಅಂಜದ, ದೇಶಪ್ರೇಮದ ಮಹೋನ್ನತ ಹೆಜ್ಜೆಯಾಗಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ತಮ್ಮ‌ ವ್ಯಕ್ತಿತ್ವದಿಂದಲೇ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ರಾಧಮಣಿ, ಶಿಕ್ಷಣ ಇಲಾಖೆ ‌ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಆರ್. ಗಂಗಾಧರ್,ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ‌‌ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ ಜಿ.ಸುರೇಶ್, ಕನ್ನಡಪರ ಹೋರಾಟಗಾರರಾದ ಗುರುರಾಜಪ್ಪ, ಚೌಡರಾಜು, ಹರೀಶ್, ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು,  ಕಲಾವಿದರುಗಳಾದ ದರ್ಗಾಜೋಗಿಹಳ್ಳಿ, ಕುಮಾರ್,  ಎಂ.ರಾಮಕೃಷ್ಣ, ಶೋಭಾ, ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

9 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

9 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

14 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago