ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ಅದ್ಧೂರಿ ಸ್ವಾಗತ

ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥ ದೊಡ್ಡಬಳ್ಳಾಪುರ ನಗರಕ್ಕೆ ಆಗಮಿಸಿತು. ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ  ವಿಜಯ ಜ್ಯೋತಿ ರಥವನ್ನು ಕಲಾತಂಡಗಳೊಂದಿಗೆ ಸ್ವಾಗತಿಸಲಾಯಿತು.

ದೊಡ್ಡಬಳ್ಳಾಪುರಕ್ಕೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ಶಾಸಕ ಧೀರಜ್ ಮುನಿರಾಜು,  ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ನಗರಸಭೆ  ಪೌರಾಯುಕ್ತ ಕಾರ್ತಿಕಶ್ವರ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮೊದಲಾದವರು ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ  ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ,  ಕಿತ್ತೂರು ರಾಣಿ ಚೆನ್ನಮ್ಮ  ಬ್ರಿಟಿಷರ ವಿರುದ್ದ  ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಸಿರುವ ಹಿಲ್ಲೆಯಲ್ಲಿ ರಾಜ್ಯಾದ್ಯಂತ ನಡೆಯುವ ಕಿತ್ತೂರು ರಾಣಿ ಚೆನ್ನಮ್ಮ ವಿಜಯಯಾತ್ರೆ ನಡೆಯುತ್ತಿದೆ. 1824 ಅಕ್ಟೋಬರ್ 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಸೈನ್ಯದೊಂದಿಗೆ ಕಿತ್ತೂರು ಕೋಟೆಯ ಹೊರಗೆ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರನ್ನು ಸೋಲಿಸಿದ ದಿನವಾಗಿದೆ. ಬ್ರಿಟಿಷರ ವಿರುದ್ದ  ಮೊದಲ ಮಹಿಳಾ  ಹೋರಾಟಗಾರ್ತಿಗೆ 1824 ರಲ್ಲಿ  ದೊರೆತ ವಿಜಯವಾಗಿದೆ ಎಂದರು.

1857 ರಲ್ಲಿ ನಡೆದ ಸಿಪಾಯಿ ದಂಗೆಗೂ ಮೊದಲೇ 1824ರಲ್ಲಿ ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಗೆಲುವು ಸಾಧಿಸಿದ ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮ, ದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು. ಸಂಗೊಳ್ಳಿ ರಾಯಣ್ಣ ಅಂತಹ ಸ್ವಾತಂತ್ರ್ಯ ಸೇನಾನಿ ಕಿತ್ತೂರು ರಾಣಿ ಚೆನ್ನಮ್ಮನ ರಾಜ್ಯದಲ್ಲಿ ಇದ್ದರು.. ಮಹಿಳೆಯರು ಘನತೆ ಮತ್ತು ನ್ಯಾಯವನ್ನು ಕಾಪಾಡುವುದರಲ್ಲಿ ಮುಂಚೂಣಿಯಲ್ಲಿರಬಹುದು  ಎಂಬುದನ್ನು ತೋರಿಸಿಕೊಟ್ಟರು. ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಇಂತಹ ವೀರ ಮಹಿಳೆಯ ನೆನಪಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಪ್ರತಿವರ್ಷ ಕಿತ್ತೂರು ಉತ್ಸವ ನಡೆಯುತ್ತದೆ. ಈ ವರ್ಷ ಕಿತ್ತೂರು ವಿಜಯಕ್ಕೆ 200 ವರ್ಷ ಆಗಿರುವ ಪ್ರಯುಕ್ತ  ಅಕ್ಟೋಬರ್ 23, 24, 25ರಂದು ಕಿತ್ತೂರಿನಲ್ಲಿ ವಿಜಯೋತ್ಸವ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್,  ಕಾಡನೂರು ಗ್ರಾಮಪಂಚಾಯಿತಿ ಅಧ್ಯಕ್ಷ ಮಧುಸೂದನ್, ಸಾಸಲು ಗ್ರಾಮಪಂಚಾಯಿತಿ ಸದಸ್ಯ ಪ್ರಸನ್ನಕುಮಾರ್,  ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು  ಭಾಗವಹಿಸಿದ್ದರು.

ದೊಡ್ಡಬಳ್ಳಾಪುರದಿಂದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿಗೆ ಕಳುಹಿಸಿ ಕೊಡಲಾಯಿತು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

16 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

21 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago