ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರ ಹಾಗೂ ಕ್ಷಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ “ವೀರಮಹಿಳೆ” ಎಂದು ಗುರುತಿಸಿ ಪ್ರಶಸ್ತಿ ನೀಡಲು, ಮಹಿಳೆಯರ ಹಾಗೂ ಸಂಸ್ಥೆಗಳ ಪ್ರಶಸ್ತಿಗಾಗಿ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ 2024 ಜನವರಿ 10ರ ಒಳಗೆ ಕಚೇರಿಗೆ ಸಲ್ಲಿಸತಕ್ಕದ್ದು.
ಆಸಕ್ತಿಯುಳ್ಳ ಸಂಸ್ಥೆ ಹಾಗೂ ವ್ಯಕ್ತಿಗಳು ಪ್ರಶಸ್ತಿಗೆ ಇರುವ ಷರತ್ತು ಹಾಗೂ ಅರ್ಜಿ ನಮೂನೆಗಳನ್ನು ಪಡೆಯಲು ಕೆಳಕಂಡ ಕಛೇರಿಯನ್ನು ಸಂಪರ್ಕಿಸಬಹುದಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಠಡಿ ಸಂಖ್ಯೆ 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ. ದೇವನಹಳ್ಳಿ ತಾ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ 080-29787445, ತಾಲ್ಲೂಕುಗಳಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ -ದೇವನಹಳ್ಳಿ 080-27682268, ದೊಡ್ಡಬಳ್ಳಾಪುರ-080-27625228, ಹೊಸಕೋಟೆ 080-27931493, ನೆಲಮಂಗಲ-080-27722177 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅನಿತಾಲಕ್ಷ್ಮಿ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…