ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರ ಹಾಗೂ ಕ್ಷಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ “ವೀರಮಹಿಳೆ” ಎಂದು ಗುರುತಿಸಿ ಪ್ರಶಸ್ತಿ ನೀಡಲು, ಮಹಿಳೆಯರ ಹಾಗೂ ಸಂಸ್ಥೆಗಳ ಪ್ರಶಸ್ತಿಗಾಗಿ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ 2024 ಜನವರಿ 10ರ ಒಳಗೆ ಕಚೇರಿಗೆ ಸಲ್ಲಿಸತಕ್ಕದ್ದು.

ಆಸಕ್ತಿಯುಳ್ಳ ಸಂಸ್ಥೆ ಹಾಗೂ ವ್ಯಕ್ತಿಗಳು ಪ್ರಶಸ್ತಿಗೆ ಇರುವ ಷರತ್ತು ಹಾಗೂ ಅರ್ಜಿ ನಮೂನೆಗಳನ್ನು ಪಡೆಯಲು ಕೆಳಕಂಡ ಕಛೇರಿಯನ್ನು ಸಂಪರ್ಕಿಸಬಹುದಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಠಡಿ ಸಂಖ್ಯೆ 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ. ದೇವನಹಳ್ಳಿ ತಾ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ 080-29787445, ತಾಲ್ಲೂಕುಗಳಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ -ದೇವನಹಳ್ಳಿ 080-27682268, ದೊಡ್ಡಬಳ್ಳಾಪುರ-080-27625228, ಹೊಸಕೋಟೆ 080-27931493, ನೆಲಮಂಗಲ-080-27722177 ಸಂಪರ್ಕಿಸಬಹುದಾಗಿದೆ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅನಿತಾಲಕ್ಷ್ಮಿ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

6 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

19 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

20 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

22 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

23 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago