ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಾರ್ಯಕ್ರಮದ ಸಚಿವರೊಟ್ಟಿಗೆ ಉದ್ಘಾಟನೆ ಮಾಡಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ಸಚಿವ ವಿ ಸೋಮಣ್ಣ ಅವರು, ಬಳಿಕ ಪ್ರಧಾನಿ ಮಂತ್ರಿಯ ವಿಡಿಯೋ ಕಾನ್ಫರೆನ್ಸ್ ನೇರ ಪ್ರಸಾರದ ಕಾರ್ಯಕ್ರಮವನ್ನು ಸಚಿವ ಮುನಿಯಪ್ಪ, ರೈತರೊಂದಿಗೆ ವೀಕ್ಷಿಸಿದರು.

ರೈತರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ಸಚಿವ ವಿ ಸೋಮಣ್ಣ ಅವರು, ರೈತರು ಸುಖಿಯಾಗಿರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 6 ಸಾವಿರ ರೂ,ಹಣ ಯಾವುದೇ ಮಧ್ಯವರ್ತಿಗಳಿಲ್ಲದೇ ರೈತರ ಖಾತೆಗೆ ನೇರವಾಗಿ ತಲುಪುತ್ತಿದ್ದು, ಪಿ.ಎಂ ಕಿಸಾನ್ ಯೋಜನೆಯಲ್ಲಿ 20ನೇ ಕಂತು ಒಳಗೊಂಡು ಇಲ್ಲಿಯ ತನಕ ದೇಶದಾದ್ಯಂತ 3.89 ಲಕ್ಷ ಕೋಟಿ ರೂ ಹಣವನ್ನು ರೈತರಿಗೆ ಸಂದಾಯ ಮಾಡಲಾಗಿದೆ. ಇಲ್ಲಿಯ ತನಕ ಕರ್ನಾಟಕ ರಾಜ್ಯದಲ್ಲಿ ರೂ,18.922 ಸಾವಿರ ಕೋಟಿ ಹಣ ಈ ಯೋಜನೆಯಲ್ಲಿ ರೈತರ ಖಾತೆಗೆ ಜಮೆ ಆಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 43.28.905 ಲಕ್ಷ ಕೋಟಿ ಅರ್ಹ ರೈತ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆದಿದ್ದಾರೆ. 2013-14ರಲ್ಲಿ ಕೇಂದ್ರದ ಕೃಷಿ ಬಜೆಟ್ ನಲ್ಲಿ ರೂ.21.933 ಸಾವಿರ ಕೋಟಿ ಇತ್ತು. ಈಗ ನರೇಂದ್ರ ಮೋದಿಯವರ ಸರ್ಕಾರದಲ್ಲಿ 2025-26ರಲ್ಲಿ 1,27,209 ಲಕ್ಷ ಕೋಟಿ ರೂ,ಗಳ ಕೃಷಿ ಬಜೆಟ್‌ನ್ನು ನೀಡಲಾಗಿದೆ. ಇಂದಿನ 20ನೇ ಕಂತಿನಲ್ಲಿ ದೇಶದಾದ್ಯಂತ ಸುಮಾರು 9.7 ಕೋಟಿ ರೈತರ ಖಾತೆಗೆ ಸುಮಾರು 20,800 ಕೋಟಿ ಹಣ ಸಂದಾಯವಾಗಲಿದೆ. ಅಂದಿನ ನಮ್ಮ ಸರ್ಕಾರದಿಂದ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ರೂ,6 ಸಾವಿರ ಜೊತೆಗೆ ರಾಜ್ಯ ಸರ್ಕಾರ 4 ಸಾವಿರ ನೀಡುತ್ತಿತ್ತು, ಇದನ್ನು ಈಗಿನ ಸರ್ಕಾರ ಜಾರಿಗೊಳಿಸಬೇಕಿದೆ ಎಂದರು. ಈ ಯೋಜನೆಯು ಮಹಿಳಾ ರೈತರ ಸಬಲೀಕರಣಕ್ಕೂ ಸಹಾಯಕಾರಿಯಾಗಿದ್ದು,
20ನೇ ಕಂತಿನಲ್ಲಿ ದೇಶದಾದ್ಯಂತ ಸುಮಾರು 2.26 ಕೋಟಿ ಮಹಿಳಾ ರೈತರು ಫಲಾನುಭವಿಗಳಿದ್ದಾರೆ ಎಂದು ತಿಳಿಸಿದರು.

ರೈತರಿಗೆ ರಸಗೊಬ್ಬರದ ಸಮಸ್ಯೆಯಿಲ್ಲ:

ರೈತರಿಗೆ ಯೂರಿಯ ಗೊಬ್ಬರ ಕೊರತೆಯನ್ನು ನಿವಾರಿಸಿದ್ದೇವೆ 6.52 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯತೆಯಿದ್ದು, ರಾಜ್ಯಕ್ಕೆ 15,825 ಸಾವಿರ ಮೆಟ್ರಿಕ್ ಟನ್ ಲಭ್ಯವಿದ್ದು, ಯೂರಿಯಾ ಮಾರಾಟ ಬೇಡಿಕೆಗಿಂದ ಹೆಚ್ಚಿದೆ ಎಂದರು.

ಇನ್ನೂ ಕೊರತೆ ಇದ್ದರೆ ಸರ್ಕಾರಕ್ಕೆ ತಿಳಿಸಬೇಕು. ನಮ್ಮ ಭಾರತ ಸರ್ಕಾರದ ಕಡೆಯಿಂದ ಉತ್ತಮ ಕೆಲಸಗಳಾಗಿವೆ,
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ದೇಶದ ಪ್ರಗತಿಯನ್ನು ಬಹುಶ 100 ರಿಂದ 500 ವರ್ಷಗಳ ಮೇಲ್ಪಂತಿಗೆ ಕೊಂಡೊಯ್ಯುತ್ತಿದ್ದಾರೆ. ರೈತರಿಗೆ 20,000 ಕೋಟಿಯನ್ನು ನೀಡುತ್ತಿದ್ದೇವೆ ಇದಕ್ಕೆ ಸಹಕರಿಸಿದ ಎಲ್ಲಾ ರೈತರಿಗೂ ಅಭಿನಂದನೆಗಳು ತಿಳಿಸುತ್ತೇನೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ತಿಳಿದು ಕೆಲಸ ಮಾಡಬೇಕು ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಮಾತನಾಡಿ, ರೈತರಿಗೆ ಯಾವುದೇ ಸಂಕಷ್ಟ ಆಗದಂತೆ ಅವರಿಗೆ ನೀಡಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡುವುದು ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಸಂಕಷ್ಟದ ಕಣ್ಣಿರು ಒರೆಸಬೇಕಿದೆ. ಈ ದಿಸೆಯಲ್ಲಿ ಬಯಲುಸೀಮೆಯ ಜಿಲ್ಲೆಗಳಿಗೆ ನೀರುಣಿಸುವ ಎತ್ತಿನ ಹೊಳೆ ಯೋಜನೆ ಪ್ರಗತಿಯಲ್ಲಿದೆ. ಇದರೊಂದಿಗೆ ಈ ಹಿಂದೆ ಪರಮಶಿವಯ್ಯ ಅವರ ವರದಿಯನ್ನು ಸಹ ನಾವು ಜಾರಿಗೊಳಿಸಬೇಕಿದ್ದು, ಇದರಿಂದ ವ್ಯರ್ಥವಾಗಿ ಸಮುದ್ರ ಸೇರುವ 500 ಟಿಎಂಸಿ ನೀರು ಲಭ್ಯವಾಗಲಿದೆ. ಪ್ರಧಾನಿ ಮೋದಿ ಅವರಿಗೆ ಆಪ್ತರಾಗಿರುವ ಜಲಶಕ್ತಿ ಖಾತೆ ಹೊಂದಿರುವ ಸಚಿವ ಸೋಮಣ್ಣ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಸಬೇಕಿದೆ ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಂಗವಾಗಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆಗಳಿಂದ ವಸ್ತು ಪ್ರದರ್ಶನ ಮಳಿಗೆಗಳು ಹಾಗೂ ಕೃಷಿ ಪರಿಕರಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಸದಸ್ಯ ಡಾ. ಕೆ.ಸುಧಾಕರ್, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಬಿ.ರಾಜಣ್ಣ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಬಿ.ಜಿ ಕಲಾವತಿ, ಉಪನಿರ್ದೇಶಕರು ಗಾಯಿತ್ರಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಬಿ.ಜಿ. ಹನುಮಂತರಾಯ, ವಿವಿಧ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

17 minutes ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

7 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

8 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

9 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

19 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

19 hours ago