Categories: ಬೀದರ್

ಕಿ.ಮೀ.ವಾರು ವೃಕ್ಷ ಹನನಕ್ಕೆ ಅನುಮತಿ ಇಲ್ಲ- ವೃಕ್ಷ ಸಂಪತ್ತಿನ ಸಂರಕ್ಷಣೆಗೆ ಕಾಯಿದೆಗೆ ತಿದ್ದುಪಡಿ-ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ

 

ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಭಾಲ್ಕಿಯಲ್ಲಿಂದು ವಿಶ್ವ ಪರಿಸರ ದಿನದ ಅಂಗವಾಗಿ ನೂತನವಾಗಿ ಸಂಸದರಾಗಿ ಆಯ್ಕೆಯಾಗಿರುವ ಸಾಗರ್ ಈ ಖಂಡ್ರೆ ಅವರೊಂದಿಗೆ ಗಿಡಗಳನ್ನು ನೆಟ್ಟ ಬಳಿಕ ಮಾತನಾಡಿದ ಅವರು, ಹಾಸನ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ನೂರಾರು ಮರ ಕಡಿತಲೆ ಮಾಡಿದ ದೂರುಗಳು ಬಂದಿದ್ದು, ಪ್ರಾಣವಾಯು ನೀಡುವ, ತಾಪಮಾನ ಹೆಚ್ಚಾಗದಂತೆ ತಡೆಯುವ ಹಾಗೂ ಭೂಫಲವತ್ತತೆ ಕಾಪಾಡುವ ವೃಕ್ಷಗಳ ಸಂರಕ್ಷಣೆಯ ಅಗತ್ಯವಿದೆ ಎಂದರು.

ಈ ನಿಟ್ಟಿನಲ್ಲಿ ಬೆಲೆ ಬಾಳುವ ಮರಗಳ ಸಂರಕ್ಷಣೆಗಾಗಿ ಪಟ್ಟಾ ಭೂಮಿ, ಗೋಮಾಳ ಮತ್ತು ಸರ್ಕಾರಿ ಭೂಮಿಯಲ್ಲಿರುವ ಬೀಟೆ, ಶ್ರೀಗಂಧ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚಿಸಲಾಗಿದ್ದು, ಇದು ಅಕ್ರಮವಾಗಿ ಮರ ಕಡಿಯುವುದಕ್ಕೆ ಕಡಿವಾಣ ಹಾಕುತ್ತದೆ ಎಂದು ತಿಳಿಸಿದರು.

ಅನುಮತಿ ಇಲ್ಲದೆ ಯಾರೇ ನಿಯಮ ಬಾಹಿರ ಮತ್ತು ಅಕ್ರಮವಾಗಿ ಮರ ಕಡಿದರೆ ಮರದ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.

ಹೊಸ ಯೋಜನೆ: ಪರಿಸರ ಹಾನಿಯ ಅಧ್ಯಯನ:

ರಸ್ತೆ, ರೈಲು ಮಾರ್ಗ, ವಿದ್ಯುತ್ ಪ್ರಸರಣ ಮಾರ್ಗ, ಕೊಳವೆ ಮಾರ್ಗ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯ ಯೋಜನೆ ಇರಲೀ ಅಥವಾ ಗಣಿಗಾರಿಕೆ, ಜಲಾಶಯ, ಬಡಾವಣೆ ನಿರ್ಮಾಣ, ಕೈಗಾರಿಕೆ ಸ್ಥಾಪನೆಯಂತಹ ಯಾವುದೇ ಯೋಜನೆ ಇರಲಿ, ಇದರಿಂದ ಪರಿಸರದ ಮೇಲೆ ಆಗುವ ಪರಿಣಾಮದ ಸಮಗ್ರ ಅಧ್ಯಯನ ಮಾಡುವ ಅಗತ್ಯವಿದೆ ಎಂಬುದನ್ನು ಇಲಾಖೆ ಮನಗಂಡಿದೆ.

ಯಾವುದೇ ಹೊಸ ಯೋಜನೆಗೆ ಬಿಡಿ ಬಿಡಿಯಾಗಿ (ಇಷ್ಟು ಕಿ.ಮೀ.ನಿಂದ ಇಂತಿಷ್ಟು ಕಿ.ಮೀ.ವರೆಗೆ) ಮರ ಕಡಿಯಲು ಅನುಮತಿ ನೀಡುವುದಕ್ಕೆ ಕಡಿವಾಣ ಹಾಕಿ, ಒಂದು ಯೋಜನೆಗೆ ಒಟ್ಟಾರೆ ಒಂದೇ ಬಾರಿ ಅನುಮತಿ ನೀಡಿ, ಪರ್ಯಾಯ ಅರಣ್ಯ ಬೆಳೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲೂ ಚಿಂತಿಸಲಾಗುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ವನಮಹೋತ್ಸವದ ವೇಳೆ ಗಿಡಗಳು ಆಳವಾಗಿ ಭೂಮಿಯಲ್ಲಿ ಬೇರು ಬಿಡುವಂತೆ ವೈಜ್ಞಾನಿಕವಾಗಿ ಸಸಿ ನೆಡುವಂತೆ ಸೂಚಿಸಲಾಗುವುದು. ಇದರಿಂದ ಬದುಕಿ ಉಳಿಯುವ ಸಸಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ ಎಂದರು.

ಬೀದರ್ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಸಾಗರ್ ಈಶ್ವರ ಖಂಡ್ರೆ, ಭಾಲ್ಕಿ ಹಿರೇಮಠದ ಡಾ. ಶ್ರೀ ಬಸವಲಿಂಗ ಪಟ್ಟದ್ದೇವರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

4 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

5 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

8 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

10 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

13 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

18 hours ago