ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು ಭೇದಿಸಿ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ.

ಜುಲೈ 11 ಹಾಗೂ ಜುಲೈ 14ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣಗಳ ತನಿಖೆ ವೇಳೆ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣ ಸಂಬಂಧ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಬಂಧಿತರಿಂದ ಸುಮಾರು 15 ಲಕ್ಷ ರೂ. ಮೌಲ್ಯದ ಅಲ್ಯೂಮಿನಿಯಂ ಕೇಬಲ್, ಕಳ್ಳತನಕ್ಕೆ ಬಳಸಿದ್ದ ವಾಹನಗಳು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಆರೋಪಿಗಳು ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲೂ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ಮುಂದುವರಿದಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಚಂದ್ರಕಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ, ಲಕ್ಷ್ಮಿ ನಾರಾಯಣ ಹಾಗೂ ಡಿವೈಎಸ್ ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ನೇತೃತ್ವದ ತಂಡವು ಈ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತ ಆರೋಪಿಗಳು ಅಂತರರಾಜ್ಯ ಮಟ್ಟದಲ್ಲಿ ಕೇಬಲ್ ಕಳ್ಳತನ ನಡೆಸುತ್ತಿದ್ದ ಜಾಲದ ಆರೋಪಿಗಳಾಗಿದ್ದು, ಇವರ ವಿರುದ್ಧ ಇನ್ನಷ್ಟು ಪ್ರಕರಣಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಆರೋಪಿಗಳ ವಿವರ:

ಎ1, ಮಿಜಾನೂರ್ ರೆಹಮಾನ್ (31), ಅಸ್ಸಾಂ

ಎ2, ಸುಮನ್ (21), ಪಶ್ಚಿಮ ಬಂಗಾಳ

ಎ3, ಕಾಮರೂಲ್ ಮಂಡಲ್(29) ಪಶ್ಚಿಮ ಬಂಗಾಳ

ಎ4, ಅಮಿತ್ ಹಾಲದಾರ್(23) ಛತ್ತೀಸ್ಗಢ

ಎ5, ಸುಮಾನ್ ಶೇಕ್(30) ಪಶ್ಚಿಮ ಬಂಗಾಳ

ಎ6, ರೋಹಿತ್ ಹಾಲ್ದಾರ್(23) ಛತ್ತೀಸ್ಗಢ

ಎ7, ಮಜೀದ್ ಶೇಕ್(44) ಪಶ್ಚಿಮ ಬಂಗಾಳ

ಎ8, ಸಾಯಿದುಲ್ ಶೇಕ್(31) ಪಶ್ಚಿಮ ಬಂಗಾಳ

ಈ ಆರೋಪಿಗಳನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ನಾರಾಯಣಸ್ವಾಮಿ, ವಿನಾಯಕ ಪಾಟೀಲ್, ನಾಗರಾಜು, ರಾಧಾಕೃಷ್ಣ, ರಂಗನಾಥ, ಸುನೀಲ್ ಭಾಸಗಿ, ಮಂಜುನಾಥ್, ಚಂದ್ರಶೇಖರ, ನಟರಾಜ್, ಸಚಿನ್ ಉಪ್ಪಾರ್, ಪ್ರವೀಣ್ ಸೇರಿದಂತೆ ಇತರರು ಇದ್ದರು.

ಪೊಲೀಸರ ಈ ಕಾರ್ಯಾಚರಣೆಯಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

2 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

14 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

20 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

21 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago