
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನಂದಗುಡಿ ಪೊಲೀಸರು ಕುಖ್ಯಾತ ಮನೆ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಡಹಗಲೇ ಮನೆ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ವಶಕ್ಕೆ ಪಡೆದು ಬಂಧಿತನಿಂದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಶ್ರೀನಿವಾದ್ ಅಲಿಯಾಸ್ ತರಕಾರಿ ಸೀನಾ(24) ಬಂಧಿತ ಆರೋಪಿ.
ಶ್ರೀನಿವಾದ್ ಅಲಿಯಾಸ್ ತರಕಾರಿ ಸೀನಾ ವಿವಿಧ ಪೊಲೀಸ್ ಠಾಣೆಗಳಲ್ಲಿ ಏಳಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮುಗಭಾಳ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿ ಶೋಕಿ ಮಾಡುತ್ತಿದ್ದ.

ಹೊಸಕೋಟೆ ಡಿವೈಎಸ್ಪಿ ಮಲ್ಲೇಶ್ ಮತ್ತು ಇನ್ಸ್ ಪೆಕ್ಟರ್ ಶಾಂತರಾಮ ನೇತೃತ್ವದ ತಂಡ ಆರೋಪಿಯನ್ನು ಬಂಧನ ಮಾಡಲಾಗಿದೆ.