ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಮಹಮ್ಮದ್ ಹನೀಫ್ ಅವರು ಸೋಮವಾರ ನಗರದ ಹೊರವಲಯದ ಕುಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಮಹಮ್ಮದ್ ಹನೀಫ್, ಕಾಂಗ್ರೆಸ್ ಪಕ್ಷದಲ್ಲಿ 1983 ರಿಂದ ನಿಷ್ಠಾವಂತ ಕಾರ್ಯಕರ್ತನಾಗಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ನಸೀರ್ ಅಹಮದ್, ಕೊತ್ತೂರು ಮಂಜುನಾಥ್, ಅನಿಲ್ ಕುಮಾರ್ ಅವರು ನನ್ನ ಮೇಲೆ ನಂಬಿಕೆ ಇಟ್ಟು ಇವತ್ತು ಕುಡಾ ಅಧ್ಯಕ್ಷ ಸ್ಥಾನಕ್ಕೆ ಆಶೀರ್ವಾದ ಮಾಡಿದ್ದಾರೆ. ಅವರುಗಳ ಮಾರ್ಗದರ್ಶನದಲ್ಲಿ ನಗರವನ್ನು ಉತ್ತಮವಾಗಿ ಅಭಿವೃದ್ಧಿ ಪಡಿಸಲು ಶ್ರಮಿಸುತ್ತೇನೆ ಎಂದರು.
ಕೋಲಾರ ನಗರವು ಜಿಲ್ಲಾ ಕೇಂದ್ರದಿಂದ ಕೂಡಿದ್ದು, ನಗರದ ಅಭಿವೃದ್ಧಿ ಕುರಿತು ಸಾಕಷ್ಟು ಕನಸುಗಳಿವೆ. ನಗರದಲ್ಲಿನ ರಸ್ತೆಗಳು, ಚರಂಡಿ, ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸುತ್ತೇವೆ. ಬಹಳಷ್ಟು ಮಂದಿ ನಿವೇಶನ ರಹಿತರಿದ್ದಾರೆ. ಅವರೆಲ್ಲರಿಗೂ ನಿವೇಶನ ದೊರೆಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಸಹಕಾರದಿಂದ ಮಾದರಿ ನಗರವಾಗಿ ರೂಪಿಸಲು ಪ್ರಮಾಣಿಕ ಪ್ರಯತ್ನ ಮಾಡತ್ತೇನೆ ಎಂದರು.
ಈ ಸಂದರ್ಭದಲ್ಲಿ ಕುಡಾ ಆಯುಕ್ತ ಶ್ರೀನಾಥ್, ಕೋಚಿಮುಲ್ ಮಾಜಿ ಅಧ್ಯಕ್ಷ ಬ್ಯಾಟಪ್ಪ, ಹಾಲಿ ನಿರ್ದೇಶಕ ಷಂಷೀರ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ವಕ್ಕಲೇರಿ ರಾಜಪ್ಪ, ಅಲ್ಪಸಂಖ್ಯಾತ ಸಮುದಾಯದ ಮುಖಂಡರಾದ ಅಬ್ದುಲ್ ಖಯ್ಯೂಂ, ಹಿದಾಯತ್ ಉಲ್ಲಾ ಷರೀಫ್, ಟ್ಯಾಕ್ಟರ್ ಮುಸ್ತಫಾ, ಸೈಫ್ ಉಲ್ಲಾ, ಜಬಿಉಲ್ಲಾ, ಚೋಟಾ ಸಾಬ್, ವೈ.ಶಿವಕುಮಾರ್ ಸುರೇಶ್, ಮುಂತಾದವರು ಇದ್ದರು.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…