ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಸತಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಿಸುತ್ತಿರುವ ಪ್ರತಿಯೊಂದು ವಾಣಿಜ್ಯ ಮಳಿಗೆಗಳಿಗೆ ನಿವೇಶನಗಳಿಗೆ ಅನುಮತಿ ನೀಡಲು 30 ಅಡಿಗಳ ರಸ್ತೆ, ಚರಂಡಿ ಇದ್ದರೆ ಅಷ್ಟೇ ಅನುಮತಿ ನೀಡಬೇಕು ಇಲ್ಲದೇ ಹೋದರೆ ಮುಂದಿನ ತೊಂದರೆಗೆ ನೀವುಗಳೇ ಕಾರಣ ವಾಗಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ನಗರದ ಹೊರವಲಯದ ಕುಡಾ ಕಛೇರಿಯಲ್ಲಿ ಮಂಗಳವಾರ 130 ನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅನುಮತಿ ಪಡೆಯುವ ಸಂದರ್ಭದಲ್ಲಿ ತಾತ್ಕಾಲಿಕ ರಸ್ತೆ ಇದೆ ಎಂದು ಮನವಿ ಸಲ್ಲಿಸುತ್ತಾರೆ ಅನುಮತಿ ಕೊಟ್ಟ ನಂತರ ರಸ್ತೆಯೂ ಇರಲ್ಲ ಚರಂಡಿ ಇರಲ್ಲ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಅಥವಾ ಡಾಂಬರ್ ರಸ್ತೆ ಕಡ್ಡಾಯವಾಗಿ ಇರಬೇಕು ಚರಂಡಿ ಮಾಡಿ ಅದರಿಂದ ನೀರು ಸರಾಗವಾಗಿ ಹರಿಯತ್ತದೆಯೇ ಎಂಬುದನ್ನು ಗಮನಿಸಬೇಕು ಎಂದರು.
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 332 ಖಾಲಿ ನಿವೇಶನಗಳು ಇದ್ದು ಅವುಗಳನ್ನು ಮಾರಾಟ ಮಾಡಲು ಕೂಡಲೇ ಯೋಜನೆ ರೂಪಿಸುವ ಜೊತೆಗೆ ಹೊಸದಾಗಿ ಸರ್ಕಾರಿ ಲೇಔಟ್ ಮಾಡಲು ಕ್ರಮ ವಹಿಸಬೇಕು ಈಗಾಗಲೇ ಸುಮಾರು 10 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು ಯುಜಿಡಿ, ಪೈಪ್ ಲೈನ್ ಬಗ್ಗೆ ಪರಿಶೀಲನೆ ಮಾಡಬೇಕು ರಸ್ತೆ ಪೂರ್ಣಗೊಂಡ ನಂತರ ಅಗೆಯುವ ಕೆಲಸ ಮಾಡಬೇಡಿ ನಗರಸಭೆ ಮಾಡಿದಂತೆ ನೀವುಗಳು ಅನವಶ್ಯಕ ಖರ್ಚುಗಳನ್ನು ತೋರಿಸಬಾರದು ಕೋಲಾರ ಅಭಿವೃದ್ಧಿಗೆ ಕೈಜೋಡಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸರ್ಕಾರ ಅಭಿವೃದ್ಧಿಗೆ ಅನುದಾನ ಕೊಡುತ್ತದೆ ಅದನ್ನು ಸಮರ್ಪಕವಾಗಿ ಅಧಿಕಾರಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಮುಂದೆ ಕುಡಾದಿಂದ ಅನುಮತಿ ಪಡೆಯಲು ಪ್ರಾಧಿಕಾರದಿಂದ 30 ಅಡಿಗಳ ರಸ್ತೆ ಕಡ್ಡಾಯ ಮಾಡಬೇಕು ಸಿಸಿ ಕ್ಯಾಮರಾಗಳ ಅಳವಡಿಕೆಗೆ ಕ್ರಮ ವಹಿಸಿ ಒಳ್ಳೆಯ ಲೇಔಟ್ ರೀತಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಆಯುಕ್ತ ಶ್ರೀನಾಥ್, ಅಧಿಕಾರಿಗಳಾದ ಲೋಕೇಶ್, ರಾಮಮೂರ್ತಿ, ಡಾ.ನಾರಾಯಣಸ್ವಾಮಿ, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…