ಕುಡಿದ ಅಮಲಿನಲ್ಲಿ ಮಚ್ಚು-ಲಾಂಗು ಝುಳಪಿಸಿ ಗ್ರಾಮಸ್ಥರ ಮೇಲೆ ದಾಂಧಲೆ: ರೋಡ್ ನಲ್ಲಿ ಮದ್ಯದ ಬಾಟಲಿ ಹೊಡೆದು ವಾಹನ ಸವಾರರಿಗೆ ಕಿರಿಕಿರಿ ಮಾಡಿದ್ದನ್ನ ಪ್ರಶ್ನಿಸಿದ್ದಕ್ಕೆ ಗಲಾಟೆ

ಕುಡಿದ ಮತ್ತಿನಲ್ಲಿ ಕುಡುಕರ ಗುಂಪೊಂದು ಮಚ್ಚು-ಲಾಂಗ್ ಝುಳಪಿಸಿ ಗ್ರಾಮಸ್ಥರ ಮೇಲೆ ದಾಂಧಲೆ ನಡೆಸಿರುವ ಘಟನೆ ಭಾನುವಾರ ರಾತ್ರಿ ಸುಮಾರು 8 ಗಂಟೆಯಲ್ಲಿ ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರಿನ ಯುವಕರ ಗುಂಪೊಂದು ಪಾಲ್ ಪಾಲ್ ದಿನ್ನೆ ಗ್ರಾಮದ ತೋಟವೊಂದರಲ್ಲಿ ಎಣ್ಣೆ ಪಾರ್ಟಿ ಮಾಡಲು ಬಂದಿತ್ತು. ಬೆಳಗ್ಗೆಯಿಂದ ಸಂಜೆವರೆಗೂ ಕುಡಿದು ಇನ್ನೇನು ಮನೆಗಳಿಗೆ ತೆರಳುವಾಗ ಪಾಲ್ ಪಾಲ್ ದಿನ್ನೆ ಬಸ್‌ಸ್ಟಾಂಡ್ ಬಳಿ ಬಂದು ನಡು ರಸ್ತೆಯಲ್ಲಿ ಖಾಲಿ ಎಣ್ಣೆ ಬಾಟಲಿಗಳನ್ನು ಹೊಡೆದು ವಾಹನ ಸವಾರರಿಗೆ ಕಿರಿಕಿರಿ ಮಾಡುತ್ತಿದ್ದರು. ಇದನ್ನು ಗಮನಿಸಿದ ಗ್ರಾಮಸ್ಥನೊಬ್ಬ ಪ್ರಶ್ನೆ ಮಾಡೋದಕ್ಕೆ ಹೋದಾಗ ಗಲಾಟೆ ಶುರುವಾಗಿದೆ ಎಂದು ಊರಿನ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಮತ್ತಿನಲ್ಲಿದ್ದ ದಾಂಡಿಗರು ಸಿಕ್ಕ‌ಸಿಕ್ಕವರ ಮೇಲೆ ಹಲ್ಲೆ ನಡೆಸುವುದಕ್ಕೆ ಮುಂದಾಗಿ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಸೃಷ್ಟಿ ಮಾಡಿದ್ದರು.

ಊರಿನ ಗ್ರಾಮಸ್ಥರೆಲ್ಲಾ ಒಂದಾಗಿ ಕುಡುಕರ ಹುಚ್ಚಾಟವನ್ನು ನಿಯಂತ್ರಿಸಲು ಬಂದಾಗ ದಿಕ್ಕಾಪಾಲಾಗಿ ಓಡಿಹೋದ ಕೆಲ‌ ಕಿರಿಕ್ ಪಾರ್ಟಿಗಳು, ಕೆಲವರು ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೂಡಲೇ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ ಗ್ರಾಮಸ್ಥರು. ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿ ಗ್ರಾಮಸ್ಥರ ‌ಕೈಗೆ ಸಿಕ್ಕಿಬಿದ್ದಿದ್ದ ದಾಂಡಿಗರನ್ನು ಠಾಣೆಗೆ ಕರೆದೊಯ್ದು ವಿಚಾರ ಮುಂದುವರಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

15 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

16 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

21 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

22 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 day ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

2 days ago