ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಗಲಗುರ್ಕಿ ಸಮೀಪ ರೆಸಾರ್ಟ್ ನಲ್ಲಿ ಯುವಕರ ಗುಂಪೊಂದು ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಭಾನುವಾರ (ಜೂ.08) ರಾತ್ರಿ ನಡೆದಿದೆ.
ಕೊಲೆಗೀಡಾದ ವ್ಯಕ್ತಿಯನ್ನು ಅಸ್ಸಾಂ ಮೂಲದ 35 ವರ್ಷದ ಮೋಹನ್ ಎಂದು ಗುರುತಿಸಲಾಗಿದೆ.
ಭಾನುವಾರ ಹ್ಯಾಪಿ ರೀಟ್ರೀಟ್ ರೆಸಾರ್ಟ್ ನಲ್ಲಿ ಪಾರ್ಟಿ ನಡೆಸಿರುವ ಸ್ನೇಹಿತರು ಕುಡಿದ ಮತ್ತಿನಲ್ಲಿ ಮೋಹನ ಎಂಬಾತನ ಮೇಲೆ ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.
ಆತನ ಮರ್ಮಾಂಗಕ್ಕೆ ಒದ್ದು ತಲೆ ದೇಹದ ವಿವಿಧ ಭಾಗಗಳ ಮೇಲೆ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ…
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಹಾಗೂ ನಂದಿ ಗಿರಿಧಾಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಕೊಲೆ ಪ್ರಕರಣದ ಸಂಬಂಧ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ..
ಕೊಲೆಯಾದ ಮೋಹನ್ ರೆಸಾರ್ಟ್ ನಲ್ಲಿ ಸಪ್ಲೇಯರ್ ಆಗಿ ಕೆಲಸ ಮಾಡುತ್ತಿದ್ದ. ಆತನ ಸ್ನೇಹಿತರಿಂದಲೇ ಇದೀಗ ಕೊಲೆಯಾಗಿದ್ದಾನೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ರೆಸಾರ್ಟ್ ವ್ಯವಸ್ಥಾಪಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…