2025ರ ಸೆ.25 ರಂದು ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೂನಮುದ್ದನಹಳ್ಳಿ ಗ್ರಾಮದಲ್ಲಿ, ಮನೆಯಲ್ಲಿದ್ದ ವೃದ್ದೆಯ ಬಳಿ ಬಂದು ಕುಡಿಯಲು ನೀರು ಕೇಳುವ ನೆಪದಲ್ಲಿ , ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದರು…
ಈ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಮಾಹಿತಿ ಸಂಗ್ರಹಿಸಿ, ಸರಗಳ್ಳತನದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಮಾಯಗಾನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಸರಗಳ್ಳತನ ಪ್ರಕರಣವಾದ ಠಾಣಾ ಮೊ.ಸಂ:116/2025 ಕಲಂ: 309(4) ರೀತ್ಯಾ ಪ್ರಕರಣದಲ್ಲಿಯು ಸಹ ಭಾಗಿಯಾಗಿರುವುದಾಗಿ ವಿಚಾರಣಾ ಸಮಯದಲ್ಲಿ ತಿಳಿದುಬಂದಿರುತ್ತದೆ.
ಸದರಿ ಎರಡು ಪ್ರಕರಣಗಳಲ್ಲಿ ಒಟ್ಟು ಸುಮಾರು 7,11,000/- ರೂ ಮೌಲ್ಯದ 59.300 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಅಮಾನತು ಪಡಿಸಿಕೊಂಡು, ಒಟ್ಟು 2 ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳಾದ, ಟಿ. ಮುರಳಿ, ಮಹಮದ್ ಅಲ್ಲಾವುದೀನ್, ನರಸಿಂಹ ಮೂರ್ತಿ, ಸಿದ್ದರಾಜು ಮತ್ತು ಸಿಬ್ಬಂದಿ ಮಹೇಶ್, ಲೋಕೇಶ್, ಸುಜಾತ, ಸಮೀವುಲ್ಲ, ಹೆಚ್. ಎನ್ ರವಿ, ರವಿಚಂದ್ರ, ಆಸೀಫ್, ರಮೇಶ್, ನರೇಶ್, ಯಾಸಿನ್ ಸಾಬ್ ನದಾಪ್, ಕುಮಾರ್ & ಶಾರದಮ್ಮ ತಂಡವು ಯಶಸ್ವಿಯಾಗಿರುತ್ತದೆ.
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…
ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…