ಕುಡಿಯುವ ನೀರಿಗಾಗಿ ಹೋರಾಟ: ಸ್ಥಳಕ್ಕೆ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಭೇಟಿ: ಸಚಿವರ ಕಾಲಿಗೆ ಬಿದ್ದು ಕುಡಿಯುವ ನೀರು ಒದಗಿಸುವಂತೆ ಮನವಿ:

ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ಹೋರಾಟ ವೇದಿಕೆ ಮುಖಂಡರು ಶುದ್ಧ ಕುಡಿಯುವ ನೀರು ಒದಗಿಸಲು ಹಾಗೂ ಕೆರೆಗಳ ಶುದ್ಧೀಕರಣ ಮಾಡುವಂತೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ನಗರದ ತಾಲೂಕು ಕಚೇರಿ ಎದುರು ಹಗಲಿರುಳು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುತ್ತಿತ್ತು.

ಇಂದು ವಿಷಯ ತಿಳಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಸ್ಥಳಕ್ಕೆ ಭೇಟಿ‌ ನೀಡಿ ಪ್ರತಿಭಟನಾ ನಿರತರ ಅಹವಾಲನ್ನು ಸ್ವೀಕರಿಸಿ ನಾಳೆಯಿಂದ ಕುಡಿಯುವ ನೀರನ್ನು ಒದಗಿಸುವುದಾಗಿ ಭರವಸೆ ನೀಡಿದರು.

ನಂತರ ಕೂಡಲೇ ಮಾಜಿ ಶಾಸಕ, ಹಾಲಿ‌ ಶಾಸಕ, ಜಿಲ್ಲಾಧಿಕಾರಿ, ಎಸಿ, ತಹಶೀಲ್ದಾರ್ ಸೇರಿದಂತೆ ಇತರೆ ಇಲಾಖಾಧಿಕಾರಿಗಳ ಸಭೆ ನಡೆಸಿ ಕೆರೆಗಳ ಶುದ್ದೀಕರಣ ಸಂಬಂಧಿಸಿದ ಸಭೆ ನಡೆಸಿ ಸರ್ಕಾರ ಗಮನಕ್ಕೆ ತಂದು ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಿದ ಹಿನ್ನೆಲೆ ತಾತ್ಕಾಲಿಕ ಉಪವಾಸ ಸತ್ಯಾಗ್ರಹ ಮೊಟಕುಗೊಳಿಸಿದ ಪ್ರತಿಭಟನಾ ನಿರತರು.

ಜಿಲ್ಲಾ ಉಸ್ತುವಾರಿ ಸಚಿವರ ಕಾಲಿಗೆ ಬಿದ್ದು ಶುದ್ಧ ಕುಡಿಯುವ ನೀರು ಒದಗಿಸಿ ನಮ್ಮ ಪ್ರಾಣ ಉಳಿಸುವಂತೆ ಕಣ್ಣೀರಿಟ್ಟ ಉಪವಾಸ ನಿರತ ರೈತ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

5 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

17 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

21 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

24 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago