ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದೇನಹಳ್ಳಿಯಲ್ಲಿರುವ ಓವರ್ ಹೆಡ್ ಟ್ಯಾಂಕ್ ನಿಂದ ಸರಬರಾಜಾಗುವ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣಗೊಂಡು ಹುಳ ಹುಪ್ಪಟೆಗಳು ಕಂಡು ಬರುತ್ತಿದ್ದು, ಊರಿನ ಗ್ರಾಮಸ್ಥರು ಆಂತಕಕ್ಕೆ ಸಿಲುಕಿದ್ದಾರೆ.
ಹಲವಾರು ದಿನಗಳಿಂದ ಕುಡಿಯುವ ನೀರಿನಲ್ಲಿ ಹುಳು ಹುಪ್ಪಟೆಗಳು ಕಂಡು ಬರುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಯಾವ ಕ್ರಮ ಕೈಗೊಳ್ಳದೇ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದಾರೆ.
ಅನೇಕ ಬಡ ಕುಟುಂಬಗಳು ರೈತಾಪಿ ವರ್ಗದ ಜನರೇ ವಾಸಿಸುವ ಈ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಪೂರೈಸುವ ನೀರೇ ಕುಡಿಯಲು ಆಧಾರವಾಗಿದೆ.
ಅಲ್ಲದೇ ಜಾನುವಾರಗಳಿಗೂ ಕುಡಿಯಲು ಇದೇ ನೀರು ಬಳಕೆ ಮಾಡುತ್ತಿರುವುದರಿಂದ ಕಲುಷಿತ ನೀರು ಸರಬರಾಜು ಆಗುತ್ತಿದ್ದು, ಇದರಿಂದ ಅನೇಕ ರೋಗ ರುಜಿನಗಳು ಹರಡುವ ಆತಂಕ ಇಲ್ಲಿಯ ನಿವಾಸಿಗಳನ್ನು ಕಾಡುತ್ತಿದೆ.
ಕಳೆದ ಒಂದು ತಿಂಗಳಿನಿಂದ ಈ ರೀತಿ ಸಮಸ್ಯೆ ಆಗುತ್ತಿದ್ದು, ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿ, ಸಿಬ್ಬಂದಿಗೆ ಮನವಿ ಮಾಡಿಕೊಂಡಿದ್ದರೂ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಪಂಚಾಯಿತಿ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂಬುವುದು ಇಲ್ಲಿನ ನಿವಾಸಿಗಳ ಆರೋಪವಾಗಿದೆ.
ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಅಗತ್ಯ ಕ್ರಮವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚಿಸಿದ್ದರು.
ಬೇಸಿಗೆ ಹಿನ್ನೆಲೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 080-22221050 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…