ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಅಥವಾ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ಶೀಘ್ರ ಸ್ಪಂದಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವ ಸಂಬಂಧ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ಡಾ ಶಿವಶಂಕರ್ ಎನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಪರ್ಯಾಯವಾಗಿ ನೀರು ಪೂರೈಸಲು ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲು ಮೊದಲ ಆದ್ಯತೆ ನೀಡಿ. ಅವಶ್ಯವಿದ್ದಲ್ಲಿ ಖಾಸಗಿ ಟ್ಯಾಂಕರ್ ಗಳ ಮೂಲಕ ನೀರನ್ನು ಪೂರೈಸಲು ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ನೋಡುವುದಾದರೆ ನೆಲಮಂಗಲದ ನಗರ ವ್ಯಾಪ್ತಿಯಲ್ಲಿ ಕೆಲವು ಭಾಗ ಹಾಗೂ ದೇವನಹಳ್ಳಿ ತಾಲ್ಲೂಕಿನ ವೆಂಕಟಗಿರಿ ಕೋಟೆ ಪಂಚಾಯಿತಿ ವ್ಯಾಪ್ತಿಯಲ್ಲಿ, ಚನ್ನರಾಯಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ಬೂದಿಗೆರೆಯ ಇಂದ್ರಹಳ್ಳಿ ಗ್ರಾಮಗಳಲ್ಲಿ ಸ್ವಲ್ಪ ಪ್ರಮಾಣದ ಸಮಸ್ಯೆ ಕಂಡು ಬಂದಿದ್ದು ಈಗಾಗಲೇ ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಬರಗಾಲದಿಂದ ಕೊಳವೆಬಾವಿಗಳಲ್ಲಿ 10 ಅಡಿಯಷ್ಟು ನೀರು ಇಳಿಕೆಯಾಗಿದೆ. ಯಾವುದೇ ನಗರ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆ ಕಂಡುಬಂದಲ್ಲಿ ತ್ವರಿತವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಜಾನುವಾರುಗಳಿಗೆ ಮೇವಿನ ಸಮಸ್ಯೆ ಇದುವರೆಗೂ ಕಂಡುಬಂದಿಲ್ಲ, ಗೋಶಾಲೆಗಳಲ್ಲಿ ಹೆಚ್ಚಿನ ಮೇವು ಸಂಗ್ರಹಿಸಿಡಿಲು ಅಧಿಕಾರಿಗಳಿಗೆ ಸೂಚಿಸಿದರು. ಕಡ್ಡಾಯವಾಗಿ ಗ್ರಾ.ಪಂ ವ್ಯಾಪ್ತಿಯಲ್ಲಿನ ಜಾನುವಾರುಗಳ ಕುಡಿಯುವ ನೀರಿನ ತೊಟ್ಟಿಗಳನ್ನು ನಿತ್ಯವೂ ಸ್ವಚ್ಛಗೊಳಿಸಿ, ನೀರಿನ ವ್ಯವಸ್ಥೆಯನ್ನು ಒದಗಿಸುವ ಕೆಲಸ ಮಾಡಬೇಕು. ಬರ ಪರಿಸ್ಥಿತಿಯನ್ನು ಸಮಗ್ರವಾಗಿ ನಿರ್ವಹಿಸಲು ತಾಲ್ಲೂಕುವಾರು ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ವಾರಕ್ಕೊಮ್ಮೆ ತಾಲ್ಲೂಕುಗಳಿಗೆ ಭೇಟಿ ನೀಡಿ ವರದಿ ನೀಡಬೇಕು ಎಂದು ಹೇಳಿದರು.
*ಬಿಸಿಗಾಳಿಯಿಂದ ರಕ್ಷಣೆ ಪಡೆಯಿರಿ:-*
ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಗಾಳಿ ಆತಂಕವಿದ್ದು, ಬಿಸಿಲಿನಿಂದ ರಕ್ಷಣೆ ಪಡೆಯುವುದು ಮುಖ್ಯ. ಜನರು ಬಿಸಿಲಿನ ಸಮಯದಲ್ಲಿ ಮನೆಗಳಿಂದ ಅತೀ ಅವಶ್ಯವಿದ್ದಾಗ ಮಾತ್ರ ಹೊರ ಬನ್ನಿ, ಅನಗತ್ಯ ಬಿಸಿಲಿನಲ್ಲಿ ಓಡಾಡುವುದು ನಿಲ್ಲಿಸಬೇಕು. ಮನೆಯಿಂದ ಹೊರಗಡೆ ಓಡಾಡುವ ವೇಳೆ ತಲೆ ಭಾಗಕ್ಕೆ ಟೋಪಿ ಇಲ್ಲವೇ ಬಟ್ಟೆಯನ್ನು ಬಳಸಿಕೊಂಡು ಬಿಸಿಗಾಳಿಯಿಂದ ರಕ್ಷಣೆ ಪಡೆಯಿರಿ.
*ಗುಡುಗು ಸಿಡಿಲಿನ ಅಪಾಯದಿಂದ ರಕ್ಷಣೆ:-*
ಗುಡುಗು ಸಿಡಿಲಿನ ವೇಳೆಯಲ್ಲಿ ಜನರು ಹಾಗೂ ಜಾನುವಾರು ಸಂರಕ್ಷಿಸಿಕೊಳ್ಳಲು ಹೊಲ-ಗದ್ದೆಗಳಲ್ಲಿ ರೈತರು ಕೆಲಸ ಮಾಡುವಾಗ ಗಿಡ-ಮರಗಳ ಆಶ್ರಯ ಪಡೆಯುವುದನ್ನು ಮಾಡಬಾರದು. ಅಕಾಲಿಕ ಮಳೆ ಸಂದರ್ಭ ಕಂಡುಬಂದಲ್ಲಿ ಮನೆಗಳಿಗೆ ತೆರಳಿ. ಬಿಸಿಗಾಳಿ, ಗುಡುಗು ಸಿಡಿಲು ಬಗ್ಗೆ ಮುನ್ನೆಚ್ಚರಿಕೆ ಪಾಲಿಸಲು ಸ್ಥಳೀಯವಾಗಿ ಜನರಲ್ಲಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಸಂಗಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…