Categories: ಕೋಲಾರ

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ- ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

ಕೋಲಾರ: ಗ್ರಾಮೀಣ ಭಾಗದಲ್ಲಿ ಇತ್ತೀಚೆಗೆ ಪ್ಯಾನಲ್ ಬೋರ್ಡ್ ಹಾಗೂ ಕೇಬಲ್‌ಗಳ ಕಳ್ಳತನ ಪ್ರಕರಣ ಹೆಚ್ಚಾಗಿದೆ. ಪೋಲೀಸರು ಕೂಡಲೇ ದೂರು ಸ್ವೀಕರಿಸಿ ಎಫ್.ಐ.ಆರ್ ದಾಖಲಿಸಬೇಕು ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬಹುದು. ಪೊಲೀಸ್ ಠಾಣೆಗಳಲ್ಲಿ ಪ್ಯಾನಲ್ ಬೋರ್ಡ್, ಕೇಬಲ್ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ ಕೂಡಲೇ ದಾಖಲಿಸಿ ಪ್ರತಿ ನೀಡಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಪೋಲೀಸರಿಗೆ ಸೂಚನೆ ನೀಡಿದರು.

ಕೋಲಾರ ನಗರದ ತಾಲ್ಲೂಕು ಕಚೇರಿಯಲ್ಲಿ ಕೋಲಾರ ವಿಧಾನಸಭಾ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಟಾಸ್ಕ್ ಫೋರ್ಸ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಎರಡು ತಿಂಗಳು ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಏನೇ ಸಮಸ್ಯೆಗಳಿದ್ದರೆ ಕೂಡಲೇ ನಮ್ಮ ಗಮನಕ್ಕೆ ತರಬೇಕು ಎಂದು ಸೂಚಿಸಿದರು.

ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ಜೊತೆಗೆ ರಾಸುಗಳಿಗೆ ಮೇವಿನ ಸಮಸ್ಯೆಯು ಬಿಗಡಾಯಿಸುವ ಸನ್ನಿವೇಶ ಎದುರಾಗಬಹುದು ಅದಕ್ಕೆ ಅವಕಾಶ ನೀಡದಂತೆ ಕ್ರಮ ವಹಿಸಿ ಎಂದು ಸೂಚನೆ ನೀಡಿದರಲ್ಲದೆ ನೀರಿನ ಸಮಸ್ಯೆ ಉಂಟಾದರೆ ಅದಕ್ಕೆ ನೇರವಾಗಿ ಅಧಿಕಾರಿಗಳೇ ಹೊಣೆಯಾಗುತ್ತೀರಿ. ಎರಡು ತಿಂಗಳು ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

ತೇರಹಳ್ಳಿ ಬೆಟ್ಟದಲ್ಲಿರುವ ಗ್ರಾಮಗಳಿಗೆ ಕೂಡಲೇ ಪೈಪ್ ಅಳವಡಿಸಿ ತುರ್ತಾಗಿ ನೀರು ಸರಬರಾಜು ಮಾಡುವಂತೆ ಕೊಂಡರಾಜಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಅವರಿಗೆ ಸೂಚನೆ ನೀಡಿದರು. ಬೆಸ್ಕಾಂ ಕಂಪನಿಯ ಅಧಿಕಾರಿಗಳು ಸಹ ಪಿಡಿಓಗಳ ಜೊತೆಗೆ ಸ್ಪಂದಿಸಬೇಕು.. ಟ್ರಾಸ್‌ಫಾರಂಗಳ ಸಮಸ್ಯೆ ಎದುರಾದರೆ ಕೂಡಲೇ ಅದನ್ನು ಸರಿಪಡಿಸಲು ಕ್ರಮ ವಹಿಸಬೇಕು ಎಂದು ಬೆಸ್ಕಾಂ ಕಂಪನಿಯ ಅಧಿಕಾರಿಗಳಿಗೆ ತಾಕೀತು ಮಾಡಿದರಲ್ಲದೆ. ಮುಖ್ಯವಾಗಿ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷರು ಗ್ರಾಮಗಳಲ್ಲಿ ರೈತರು ಬೆಳೆಯುವ ಬೆಳೆಗಳು ಪ್ರಕೃತಿ ವಿಕೋಪದಿಂದ ನಷ್ಟ ಉಂಟಾಗಿದ್ದರೆ ಕೂಡಲೇ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿ ರೈತರಿಗೆ ಸರ್ಕಾರದಿಂದ ಸಿಗುವ ನಷ್ಟ ಪರಿಹಾರವನ್ನು ಕೊಡಿಸಬೇಕು ಎಂದು ಹೇಳಿದರು.

ವೇಮಗಲ್ ಪಟ್ಟಣ ಪಂಚಾಯಿತಿಯ ರಾಜಸ್ವ ನಿರೀಕ್ಷಕರು ಸಂಜೆ ಯಾಗುತ್ತಿದ್ದಂತೆ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಳ್ಳುವ ಪ್ರವೃತ್ತಿಯನ್ನು ಬಿಡಬೇಕು. ನಾನೇ ಹಲವಾರು ಬಾರಿ ದೂರವಾಣಿ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ. ಫೋನ್ ಸ್ಪಿಚ್ ಆಫ್ ಮಾಡುವವರಿಗೆ ಬಹುಮಾನ ನೀಡಲಾಗುವುದು ಎಂದರಲ್ಲದೆ ನಾನು ಇದನ್ನು ಸೀರಿಯಸ್ ಹಾಗಿ ತೆಗೆದುಕೊಂಡರೆ ಯಾರಿಂದಲೂ ಕಾಪಾಡಲು ಸಾಧ್ಯವಿಲ್ಲ. ತೊಂದರೆ ಕೊಟ್ಟರೆ ಮುಟ್ಟಿ ನೋಡಿಕೊಳ್ಳಬೇಕು ಹಾಗೆ ಮಾಡುತ್ತೇವೆ. ನಿಮ್ಮ ಬಗ್ಗೆ ಎಲ್ಲಾ ಗೊತ್ತಿದೆ. ಈಗಾಗಲೇ ಸಾಕಷ್ಟು ಬಾರಿ ನಿಮಗೆ ಹೇಳಿದ್ದೇನೆ ತಿದ್ದಿಕೊಂಡು ಎರಡು ತಿಂಗಳು ಮೊಬೈಲ್ ಸ್ವಿಚ್ ಆಫ್ ಮಾಡದೇ ನೀರಿನ ಸಮಸ್ಯೆ ಹಾಗೂ ರಾಸುಗಳ ಮೇವಿಗೆ ಅಭಾವ ಉಂಟಾಗದಂತೆ ಕೆಲಸ ಮಾಡಬೇಕು ಎಂದು ಹರಿಹಾಯ್ದರು.

ಕೋಲಾರ ವಿಧಾನಸಭಾ ವ್ಯಾಪ್ತಿಯಲ್ಲಿರುವ ಗ್ರಂಥಾಲಯ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೊದಲು ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಬೇಕು. ಅದಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ನಿರಂತವಾಗಿ ಸಂಪರ್ಕದಲ್ಲಿದ್ದು ಸ್ಪಂದಿಸಬೇಕು ಎಂದು ಪಿಡಿಓಗಳಿಗೆ ಸೂಚನೆ ನೀಡಿದರು.

ಈಗಾಗಲೇ ಬೇಸಿಗೆ ಪ್ರಾರಂಭವಾಗಿದ್ದು ನೀರಿನ ಅಭಾವ ಉಂಟಾಗದಂತೆ ಪಿಡಿಓಗಳು ಕ್ರಮ ವಹಿಸಬೇಕು. ಜೊತೆಗೆ ಬೋರ್‌ವೆಲ್‌ಗಳಿಗೆ ಪಂಪು ಮೋಟಾರ್ ಸಮಸ್ಯೆ ಉಂಟಾದರೆ ಕೂಡಲೇ ತಿಳಿಸಿ ಹೊಸ ಪಂಪು ಮೋಟಾರ್ ಅಳವಡಿಸಿ ಕ್ರಮ ವಹಿಸುತ್ತೇನೆ. ನಗರಸಭೆ ವ್ಯಾಪ್ತಿಯಲ್ಲಿಯೂ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಗಮನ ಹರಿಸಬೇಕು. ಕೂಡಲೇ ಆಯಾ ವಾರ್ಡಿನ ನಗರಸಭೆ ಸದಸ್ಯರು ಅಧಿಕಾರಿಗಳು ಹಾಗೂ ಸ್ಥಳಿಯ ಪ್ರಮುಖರದ್ದು ಸೇರಿಸಿ ಏನೆ ಸಮಸ್ಯೆ ಇದ್ದರೂ ಚರ್ಚಿಸಿದಾಗ ಸಮಸ್ಯೆಯನ್ನು ಬಗೆಹರಿಸಬಹುದು ಎಂದರು.

ಕೋಲಾರ ನಗರಕ್ಕೆ ಹೊಂದಿಕೊಂಡಿರುವ ಕೋಡಿಕಣ್ಣೂರು ಕೆರೆ ಸ್ವಚ್ಚತೆಯಿಲ್ಲದೆ ಕೂಡಿದೆ ಅಲ್ಲದೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಗಮನ ಹರಿಸಿದ್ದರೆ ಕೆಸಿ ವ್ಯಾಲಿ ಯೋಜನೆ ಮೂಲಕ ನೀರು ತುಂಬಿಸಬಹುದಾಗಿದ್ದು ಕೆರೆಯಲ್ಲಿ ನೀರು ತುಂಬಿದ್ದರೆ ನಗರದಲ್ಲಿ ನೀರಿನ ಸಮಸ್ಯೆ ಉದ್ಭವವಾಗುತ್ತಿರಲಿಲ್ಲ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗೆ ತಿಳಿಸಿದರು.

ತಹಶೀಲ್ದಾರ್ ನಯನ ಮಾತನಾಡಿ ಕಂದಾಯ ಇಲಾಖೆ ಅಧಿಕಾರಿಗಳು ಎಲ್ಲಾ ಅಧಿಕಾರಗಳೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಬೇಕು ಏನೇ ಸಮಸ್ಯೆ ಇದ್ದರೂ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರಾಗಿರುವ ನಮ್ಮ ಗಮನಕ್ಕೆ ತರಬೇಕು. ಯಾವುದೇ ಅಧಿಕಾರಿಗಳು ಸ್ಪಂದಿಸದೇ ಇದ್ದರೆ ಕೂಡಲೇ ಅಂತವರ ಬಗ್ಗೆ ಮಾಹಿತಿ ನೀಡಿ ಕ್ರಮ ವಹಿಸುತ್ತೇನೆ ಎಂದು ತಿಳಿಸಿದರು.

ನೀರಿನ ಸಮಸ್ಯೆ ಕುರಿತು ಶಾಸಕರು ಟಾಸ್ಕ್ ಫೋರ್ಸ್ ಸಭೆಯನ್ನು ಗಂಬೀರವಾಗಿ ವಿಷಯಗಳನ್ನು ಚರ್ಚಿಸುತ್ತಿದ್ದತೆ ಇತ್ತ ಸಭೆಗೆ ಆಗಮಿಸಿ ಕೆಲ ಅಧಿಕಾರಿಗಳು ಸಭೆಯ ಗಂಬೀರತೆಯನ್ನು ಅರಿಯದೇ ತಮಗಿಷ್ಟ ಬಂದಂತೆ ಮೊಬೈಲ್ ನೋಡಿಕೊಂಡು ಅವರದ್ದೇ ವಿಚಾರಗಳನ್ನು ಚರ್ಚೆ ಮಾಡುತ್ತಿದ್ದರು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಇಓ ಬಿಎ ಮಂಜುನಾಥ್, ನಗರಸಭೆಯ ಪೌರಾಯುಕ್ತ ಪ್ರಸಾದ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ವೈ. ಶಿವಕುಮಾರ್ ಸೇರಿದಂತೆ ಪಿಡಿಓಗಳು, ಎಲ್ಲಾ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Share
Published by
Ramesh Babu

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

7 hours ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

21 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

22 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago