‘ಸರ್ಕಾರದಿಂದ ಬಿಡುಗಡೆಯಾದ ಅನುದಾನ ಆಯಾ ಆರ್ಥಿಕ ವರ್ಷದಲ್ಲೇ ಬಳಕೆ ಮಾಡಬೇಕು ಅಮೃತ್ ನಗರೋತ್ಥಾನ- 04 ರಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಪೌರಾಡಳಿತ ಹಾಗೂ ಹಜ್ ಇಲಾಖೆ ಸಚಿವರಾದ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರೋತ್ಥಾನ-04 ಮೂರು ವರ್ಷದ ಯೋಜನೆ, ಕೈಗೆತ್ತಿಕೊಂಡಿರುವ ಕಾಮಗಾರಿಗಳು ಇನ್ನು ಬಾಕಿ ಇರುವುದರಿಂದ ಯೋಜನೆಯನ್ನು 4 ವರ್ಷಗಳಿಗೆ ವಿಸ್ತರಣೆ ಮಾಡಲಾಗಿದೆ. ರಾಜ್ಯಾದ್ಯಂತ ನಗರೋತ್ಥಾನ-4 ರಲ್ಲಿ 600 ಕಾಮಗಾರಿಗಳು ಬಾಕಿ ಉಳಿದಿದೆ. ನಗರೋತ್ಥಾನ-05 ಕ್ಕೆ 5000 ಕೋಟಿ ನೀಡಲು ಆರ್ಥಿಕ ಇಲಾಖೆಗೆ ವರದಿ ನೀಡಲಾಗಿದೆ. ಮೊದಲು ನಗರೋತ್ಥಾನ-4 ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಬೇಕು ಎಂದರು.
ಮುಂಬರುವ ಬೇಸಿಗೆ ಸಮಯದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣ ಆಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಸಮಸ್ಯೆ ಉಂಟಾಗುವ ಪ್ರದೇಶದಲ್ಲಿ ಮೊದಲೇ ಅಗತ್ಯ ತಯಾರಿ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
*ಬಾಕಿ ಇರುವ ತೆರಿಗೆಯನ್ನು ಶೀಘ್ರ ವಸೂಲಾತಿ ಮಾಡಿ*
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ತೆರಿಗೆ, ಅಂಗಡಿ ಮಳಿಗೆಗಳ ಬಾಡಿಗೆ ತೆರಿಗೆ, ಉದ್ದಿಮೆ ಪರವಾನಗಿ ತೆರಿಗೆ ವಸೂಲಾತಿಯಲ್ಲಿ ಶೇಕಡ 100% ರಷ್ಟು ಪ್ರಗತಿ ಸಾಧಿಸಿ, ಜೊತೆಗೆ 10 ವರ್ಷಗಳಿಂದ ಒಂದೇ ರೀತಿಯ ತೆರಿಗೆ ಕಟ್ಟುತ್ತಿರುವ ತೆರಿಗೆದಾರರ ಮನೆಗಳಿಗೆ ಭೇಟಿ ನೀಡಿ, ಅಲ್ಲಿ ಎಷ್ಟು ಮಹಡಿ ಮನೆಗಳಿವೆ, ಒಂದೇ ಮನೆಗೆ ಬಾಡಿಗೆ ಕಟ್ಟುತ್ತಿದ್ದಾರೆ, ಎಷ್ಟು ಮನೆಗಳಿಗೆ ಬಾಡಿಗೆ ಕಟ್ಟುತ್ತಿದ್ದಾರೆ ಎನ್ನುವುದನ್ನು ಪರಿಶೀಲನೆ ಮಾಡಿ ಎಂದರು.
*ಇ-ಖಾತೆ ಮಾಡಲು ವಿಶೇಷ ಶಿಬಿರ ಆಯೋಜಿಸಿ*
ಅನಧಿಕೃತ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ, ಪ್ರತ್ಯೇಕ ವಹಿ (ಬಿ-ರಿಜಿಸ್ಟರ್) ಯಲ್ಲಿ ದಾಖಲಿಸಲು ಅವಕಾಶ ಕಲ್ಪಿಸಿದ್ದು, ಇದರಿಂದ ನಗರ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ఆస్తి ತೆರಿಗೆ ಸಂಗ್ರಹಣೆ ಮಾಡಲು ಅನುಕೂಲವಾಗುತ್ತದೆ. ಹಾಗೂ ಸಾರ್ವಜನಿಕರಿಗೆ ತಮ್ಮ ಆಸ್ತಿಯ ಇ-ಖಾತಾ ದೊರೆಯುವುದರಿಂದ ವಹಿವಾಟುಗಳನ್ನು ನಡೆಸಲು ಕೂಡ ಅನುಕೂಲವಾಗುತ್ತದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ -ಅಭಿಯಾನವನ್ನು ನಡೆಸಿ ನಿಯಮಿತವಾಗಿ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನಿಗಧಿಪಡಿಸಿದ ಸಮಯದೊಳಗೆ ಇ-ಖಾತಾ ದೊರೆಯುವಂತೆ ಕ್ರಮ ಕೈಗೊಳ್ಳಿ ಎಂದರು.
ಇದಕ್ಕೂ ಮುನ್ನ ದೇವನಹಳ್ಳಿ ಪಟ್ಟಣದ ಎಸ್.ಎಫ್.ಟಿ.ಪಿ ಘಟಕ ಹಾಗೂ ಸಿಹಿನೀರು ಕೆರೆಯ ನೀರು ಸಂಸ್ಕರಣಾ ಘಟಕಗಳಿಗೆ ಪೌರಾಡಳಿತ ಸಚಿವರು ಭೇಟಿ ನೀಡಿ, ಮಾಹಿತಿ ಪಡೆದರು.
ಸಭೆಯಲ್ಲಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಪಿ.ಎನ್ ರವಿಂದ್ರ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಚಿವರ ಆಪ್ತ ಕಾರ್ಯದರ್ಶಿ ಡಾ. ಮುರಳೀಧರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ರಮೇಶ್, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರಾದ ಸುಮಿತ್ರಾ ಕೆ, ಉಪಾಧ್ಯಕ್ಷರಾದ ಎಂ. ಮಲ್ಲೇಶ್, ಪೌರಾಡಳಿತ ನಿರ್ದೇಶನಾಲಯದ ಬಸವರಾಜ ಸೇರಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…