Categories: ರಾಜ್ಯ

ಕುಡಿಯುವ ನೀರು ಅರಸಿ ಕಾಡಿನಿಂದ ನಾಡಿಗೆ ಬಂದ ಚುಕ್ಕಿ ಜಿಂಕೆ..!

ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮಕ್ಕೆ ಕೊಂಬುವುಳ್ಳ 7 ವರ್ಷ ವಯಸ್ಸಿನ ಗಂಡು ಚುಕ್ಕಿ ಜಿಂಕೆಯೊಂದು ಕಾಡಿನಿಂದ ದಾರಿತಪ್ಪಿ ಬಂದ ಘಟನೆ ಶನಿವಾರ ಸಂಜೆ ನಡೆದಿದೆ.

ಕಾಡಂಚಿನ ಚನ್ನಪ್ಪಾಜಿ ಬೆಟ್ಟದ ಕಡೆಯಿಂದ ದಾರಿ ತಪ್ಪಿ ಬಂದ ಚುಕ್ಕಿ ಜಿಂಕೆಯನ್ನು ಗ್ರಾಮದ ನಾಯಿಗಳು ಓಡಿಸಿಕೊಂಡು ಬಂದಾಗ ಜಿಂಕೆಯು ಹೆದರಿ ಗ್ರಾಮದ ವಸಂತಮ್ಮ ಎಂಬುವರ ಮನೆಗೆ ನುಗ್ಗಿದೆ.

ಭಯದಿಂದ ಮನೆಯಲ್ಲಿದ್ದ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿದೆ. ಜಿಂಕೆಯನ್ನು ನೋಡಿ ಮನೆಯವರು ಸಹ ಗಾಬರಿಗೊಂಡಿದ್ದಾರೆ.

ಇದನ್ನು ಕಂಡ ಗ್ರಾಮದ ಮುಖಂಡರಾದ ಎಂ.ರಾಮಕೃಷ್ಣ, ಎಂ.ಪುಟ್ಟೇಗೌಡ, ಎಚ್.ಎಸ್.ಸಿದ್ದರಾಜು ಇತರರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಣೆ ಮಾಡಿದ್ದರೆ.

ಜಿಂಕೆಗೆ ತೊಂದರೆಯಾಗದಂತೆ ಅದನ್ನು ಹಿಡಿದು ಹಗ್ಗದಿಂದ ಕಟ್ಟಿ ಹಾಕಿದರು. ನಂತರ ಅದಕ್ಕೆ ನೀರು ಕುಡಿಸಿದರು. ಆನಂತರ ಅರಣ್ಯ ಇಲಾಖೆ ಸಿಬ್ಬಂದಿಗೆ ದೂರವಾಣಿ ಮೂಲಕ ವಿಷಯ ಮುಟ್ಟಿಸಿದ್ದಾರೆ.

ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಾತನೂರು ವಿಭಾಗದ ಸಿಬ್ಬಂದಿ ಕಾಂತರಾಜು, ರಿಜ್ವಾನ್ ಅವರು ಜಿಂಕೆಯನ್ನು ವಶಕ್ಕೆ ಪಡೆದುಕೊಂಡರು.

ಕುಡಿಯುವ ನೀರು ಅರಸಿಕೊಂಡು ಈ ಜಿಂಕೆ ಕಾಡಿನಿಂದ ನಾಡಿಗೆ ಬಂದಿದೆ. ಇದಕ್ಕೆ ಆರೋಗ್ಯ ತಪಾಸಣೆ ನಡೆಸಿ ಆನಂತರ ಮೇಲಾಧಿಕಾರಿಗಳ ಸೂಚನೆ ಮೇರೆಗೆ ಅರಣ್ಯಕ್ಕೆ ಬಿಡಲಾಗುವುದು ಎಂದು ಅವರು ತಿಳಿಸಿ, ಜೊತೆಯಲ್ಲಿ ಕೊಂಡೊಯ್ದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

3 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

16 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

17 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

19 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

20 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

22 hours ago