ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕೊಟ್ಟ ಮಾತಿನಂತೆ ಕುಡಿಯುವ ನೀರನ್ನು ಒದಗಿಸುವಂತೆ ಒತ್ತಾಯಿಸಿ ನಗರದ ತಾಲೂಕು ಕಚೇರಿ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಅರ್ಕಾವತಿ ನದಿಪಾತ್ರದ ಕೆರೆಗಳ ಹೋರಾಟ ಸಮಿತಿ ಹಾಗೂ ವಿವಿಧ ಹೋರಾಟ ಸಂಘಟನೆಗಳು.
ಸ್ಥಳಕ್ಕೆ ಬಂದು ಪ್ರತಿಭಟನಾಕಾರರ ಅಹವಾಲನ್ನು ಸ್ವೀಕರಿಸದ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ತಾಲೂಕು ಕಚೇರಿಗೆ ಬೀಗ ಹಾಕಿ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೂಡಲೇ ತಹಶೀಲ್ದಾರ್ ಮೋಹನ ಕುಮಾರಿ ಅವರು ಸ್ಥಳಕ್ಕೆ ದೌಡಾಯಿಸಿ ಕುಡಿಯುವ ನೀರು ಸರಬರಾಜು ಮಾಡುವ ಕುರಿತು ಸಭೆ ನಡೆಸಲಾಗುವುದು, ಈ ಕುರಿತು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಆದ್ದರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಬಿಡಬೇಕು ಎಂದು ಮನವಿ ಮೇರೆಗೆ ಸತ್ಯಾಗ್ರಹವನ್ನು ಹಿಂಪಡೆದ ಪ್ರತಿಭಟನಾಕಾರರು.