ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣೆಯಲ್ಲಿ ಬರ ಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವ ಸಂಬಂಧ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ಡಾ ಶಿವಶಂಕರ್ ಎನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆಯಿತು.
ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಪರ್ಯಾಯವಾಗಿ ನೀರು ಪೂರೈಸಲು ಕೊಳವೆ ಬಾವಿಗಳನ್ನು ಗುರುತಿಸಲು, ಅವಶ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ಹಾಗೂ ಟ್ಯಾಂಕರ್ ಗಳ ಮೂಲಕ ನೀರನ್ನು ಪೂರೈಸಲು ಸಿದ್ಧರಾಗಿರಿ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಜಾನುವಾರಗಳ ಮೇವು ಕಿಟ್ ಗಳ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಕ್ರಮವಹಿಸಲು ಪಶು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗೋಶಾಲೆ ಹಾಗೂ ಮೇವಿನ ಬ್ಯಾಂಕ್ ನಿರ್ವಹಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ.ಅನುರಾಧ ಕೆ.ಎನ್ ಅಪರ ಜಿಲ್ಲಾಧಿಕಾರಿ ಅಮರೇಶ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಶಿವರಾಜ್, ನೆಲಮಂಗಲ ತಾಲ್ಲೂಕು ತಹಸೀಲ್ದಾರ್ ಅರುಂಧತಿ, ಹೊಸಕೋಟೆ ತಾಲ್ಲೂಕು ತಹಸೀಲ್ದಾರ್ ವಿಜಯ ಕುಮಾರ್, ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.