ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ, ವಸತಿ ಹಂಚಿಕೆ ಮಾಡಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ದೇವನಹಳ್ಳಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು

ರಾಜ್ಯದ ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ಒದಗಿಸುವುದು ನಮ್ಮ ಸರ್ಕಾರದ ಗುರಿ. ಈ ನಿಟ್ಟಿನಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 50,000 ನಿವೇಶನ ಹಂಚಿಕೆ ಗುರಿ ಹೊಂದಲಾಗಿದೆ. ಸರ್ಕಾರಿ ಭೂಮಿ ಅವಶ್ಯಕತೆ ಅನುಗುಣವಾಗಿ ನಿವೇಶನ ಅಭಿವೃದ್ಧಿ ಪಡಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ವಿತರಿಸಲಾಗುವುದು. ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಈಗಾಗಲೇ ನಿವೇಶನ ಅಭಿವೃದ್ಧಿ ಪಡಿಸಲಾಗುತ್ತಿದ್ದು ನಿಗದಿತ ಅವಧಿಯೊಳಗೆ ಸೈಟ್ ಹಂಚಿಕೆ ಮಾಡಲಾಗುವುದು ಎಂದರು.

ಜಿಲ್ಲೆಯಾದ್ಯಂತ ಮಳೆ ಕೊರತೆ ಉಂಟಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಮೇವಿಗೆ ಸಮಸ್ಯೆ ಆಗಬಹುದು. ಕುಡಿಯುವ ನೀರು ಸಮಸ್ಯೆ ಆಗದಂತೆ ಅಗತ್ಯ ಮುಂಜಾಗ್ರತಾ ವಹಿಸಿ. ಜಾನುವಾರುಗಳಿಗೆ ಮೇವಿಗೆ ತೊಂದರೆ ಆಗದಂತೆ ರೈತರಿಗೆ ಮೇವಿನ ಕಿಟ್ ಗಳನ್ನು ಪೂರೈಕೆ ಮಾಡಿ. ಸರ್ಕಾರಿ ಗೋಮಾಳ ಜಮೀನುಗಳಲ್ಲಿ ಮೇವು ಬೆಳೆದು ಶೇಖರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಯಾರಾದರು ಅಧಿಕಾರಿ ಕೆಲಸ ಮಾಡಿಕೊಟ್ಟಿಲ್ಲ, ಸ್ಪಂದಿಸಿಲ್ಲ ಎಂದು ಯಾರಾದರೂ ರೈತರು, ಸಾರ್ವಜನಿಕರು ನನ್ನ ಬಳಿ ಹೇಳಿದರೇ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಜನರ ಸೇವೆಗಾಗಿ ಇರುವುದು ಸರ್ಕಾರ ನಮಗೆ ಸಂಬಳ ಕೊಡುತ್ತದೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದರೆ ಅಂತಹ ಅಧಿಕಾರಿ ಇಲ್ಲಿ ಇದ್ದಾದರು ಏನು ಪ್ರಯೋಜನ ಎಂದು ಖಾರವಾಗಿ ನುಡಿದರು.

ವಸತಿ ಶಾಲೆ, ವಸತಿ ನಿಲಯಗಳ ನಿರ್ವಹಣೆ ಆಯಾ ಇಲಾಖೆಗಳ ಜವಾಬ್ದಾರಿ. ಅನುದಾನ ಸದ್ಬಳಕೆ ಆಗಬೇಕು. ಮಕ್ಕಳಿಗೆ ಗುಣಮಟ್ಟದ ಆಹಾರ ಪೂರೈಕೆ ಜೊತೆಗೆ ಶೈಕ್ಷಣಿಕ ಫಲಿತಾಂಶ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದರು.

*ಭವನಗಳ ನಿರ್ವಹಣೆಗೆ ಹೊಸ ಮಾರ್ಗೋಪಾಯ*

ರಾಜ್ಯಾದ್ಯಂತ ಅಂಬೇಡ್ಕರ್, ವಾಲ್ಮೀಕಿ, ಜಗಜೀವನರಾಂ ಭವನಗಳ ಸ್ಥಿತಿಗತಿ ಬಗ್ಗೆ ವರದಿ ನೋಡಿದಾಗ ಬಹುತೇಕ ಭವನಗಳು ಬಳಸದೇ, ನಿರ್ವಹಣೆ ಇಲ್ಲದೆ ಹಾಗೇ ಉಳಿದಿವೆ. ಅಂತಹ ಭವನಗಳಲ್ಲಿ ಲೈಬ್ರರಿ, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಇದರಿಂದಾಗಿ ಯುವ ಸಮೂಹ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷರಾದ ರಾಜಣ್ಣ, ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಜಿಪಂ ಸಿಇಒ ಡಾ ವಾಸಂತಿ ಅಮರ್, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಇಒ ಮುನಿರಾಜು, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

37 minutes ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

2 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

6 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

7 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

13 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

13 hours ago